ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಚಂದ್ರಯಾನ-2 ವಿಕ್ರಮ್ ಲ್ಯಾಂಡರ್ ನಿಂದ ಸಂಪರ್ಕ ಕಳೆದುಕೊಂಡ ನಂತರ, ಆ ವಿಷಯವಾಗಿ ಟ್ವೀಟ್ ಮಾಡುತ್ತಾ, ಇಸ್ರೋ ವಿಜ್ಞಾನಿಗಳು ಹಲವು ದಿನಗಳ ಶ್ರಮದಿಂದ ಮಾಡಿದ ಕಾರ್ಯವು ವ್ಯರ್ಥವಾಗಿಲ್ಲವೆಂದು ಟ್ವೀಟ್ ಮಾಡಿ ಅವರಿಗೆ ಹುರುಪನ್ನು ನೀಡುವ ಉತ್ತಮ ಕೆಲಸವನ್ನು ಮಾಡಿದ್ದಾರೆ. ಭಾರತದ ಹೆಮ್ಮೆಯ ಸಂಸ್ಥೆ ಇಸ್ರೋ ಕೈಗೊಂಡಿದ್ದ ಚಂದ್ರಯಾನ -2 ಯೋಜನೆ ಬಹುತೇಕ ಯಶಸ್ವಿಯಾಗುವುದರಲ್ಲಿರುವಾಗಲೇ, ಅಂತಿಮ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಸಂಪರ್ಕ ಕಡಿತಗೊಂಡಿತು.

ಈ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು ವಿಜ್ಞಾನಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾ, ನಮ್ಮ ವಿಜ್ಞಾನಿಗಳ ಸಾಧನೆ ಪ್ರತಿಯೊಬ್ಬ ಭಾರತಿಯರಿಗೂ ಸ್ಫೂರ್ತಿ ಎಂದು ಅವರು ಹೇಳಿದ್ದಾರೆ. ಅವರು ತಮ್ಮ ಟ್ವೀಟ್ ನಲ್ಲಿ
ಚಂದ್ರಯಾನ್ 2 ಮೂನ್ ಮಿಷನ್‌ನಲ್ಲಿ ಇಸ್ರೋ ವಿಜ್ಞಾನಿಗಳ ತಂಡದ ಅದ್ಭುತ ಕಾರ್ಯಕ್ಕಾಗಿ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಮರ್ಪಣೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ಇದು ಇನ್ನೂ ಅನೇಕ ಮಾರ್ಗ ಮುರಿಯುವ ಮತ್ತು ಮಹತ್ವಾಕಾಂಕ್ಷೆಯ ಭಾರತೀಯ ಬಾಹ್ಯಾಕಾಶ ಯಾತ್ರೆಗಳಿಗೆ ಅಡಿಪಾಯ ಹಾಕಿದೆ ಎಂದಿದ್ದಾರೆ.

ರಾಹುಲ್ ಗಾಂಧಿಯವರು ಮಾತ್ರವಲ್ಲದೆ ಕಾಂಗ್ರೆಸ್ ಕೂಡಾ ಟ್ವೀಟ್ ಮಾಡಿದ್ದು, ಈ ಉದ್ವಿಗ್ನ ಕಾಲದಲ್ಲಿ ನಾವು ಇಡೀ ರಾಷ್ಟ್ರವು ಇಸ್ರೋನ ಇಡೀ ತಂಡದ ಜೊತೆಗಿದೆ ಎಂದಿದ್ದು, ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆಯು ನಮ್ಮ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಜೈ ಹಿಂದ್ ಎಂದು ಟ್ವೀಟ್ ಮಾಡಿದೆ. ಪಕ್ಷ ಬೇಧ ಮರೆತು ಎಲ್ಲರೂ ಇಸ್ರೋನ ವಿಜ್ಞಾನಿಗಳ ಶ್ರಮವನ್ನು ಮೆಚ್ಚಿ ಅವರ ಮುಂದಿನ ನಡೆಗೆ ಪ್ರೋತ್ಸಾಹ ನೀಡುವ ಮೂಲಕ ಭಾರತೀಯರ ಮೆಚ್ಚುಗೆಯನ್ನು ಪಡೆಯುತ್ತಿದ್ದಾರೆ ರಾಜಕೀಯ ನಾಯಕರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here