ಪ್ರಧಾನಿ ನರೇಂದ್ರ ಮೋದಿಯವರು ಇಂದು ಚೆನ್ನೈನ ಮಹಾಬಲಿಪುರಂನಲ್ಲಿ ದಕ್ಷಿಣ ಭಾರತದ ಸಾಂಪ್ರದಾಯಿಕ ಉಡುಗೆಯಾಗಿರುವ ಪಂಚೆ, ಶರ್ಟ್ ಹಾಗೂ ಶಲ್ಯ ಧರಿಸುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ನಮ್ಮ ನೆರೆ ರಾಷ್ಟ್ರವಾದ ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಎರಡು ದಿನಗಳ ಅನೌಪಚಾರಿಕ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದಾರೆ. ಈ ವೇಳೆ ಅವರು ತಮಿಳುನಾಡಿನ ಮಹಾಬಲಿಪುರಂನಲ್ಲಿ ಪ್ರಧಾನಿಯವರು ಚೀನಾ ಅಧ್ಯಕ್ಷರನ್ನು ಸ್ವಾಗತಿಸಲು ದಕ್ಷಿಣ ಭಾರತದ ಸಾಂಪ್ರದಾಯಿಕವಾದ ಉಡುಗೆಯನ್ನು ತೊಟ್ಟು ಬರುವ ಮೂಲಕ ಚೀನಾ ಅಧ್ಯಕ್ಷರಿಗೆ ಸ್ವಾಗತ ಕೋರಿದ್ದಾರೆ.

ಸಾಧಾರಣವಾಗಿ ಮೋದಿಯವರು ಎಲ್ಲಿಗೆ ಹೋದರೂ, ಯಾವುದೇ ದೇಶಕ್ಕೆ ಭೇಟಿ ನೀಡಿದರೂ ಅಥವಾ ಭಾರತಕ್ಕೆ ಯಾರೇ ಆಗಮಿಸಿದರೂ ಕೂಡಾ ಬಿಳಿ ಬಣ್ಣದ ಕುರ್ತಾದಲ್ಲಿ ಕಾಣಿಸಿಕೊಳ್ಳುವುದು ಎಲ್ಲರಿಗೂ ತಿಳಿದಿದೆ. ಆದರೆ ಈ ಬಾರಿ ವಿಭಿನ್ನವಾಗಿ ಅವರು ಪಂಚೆ ತೊಟ್ಟಿದ್ದು, ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಎಲ್ಲರ ಮೆಚ್ಚುಗೆ ಪಡೆಯುತ್ತಾ ಸಾಗಿದೆ. ಇತ್ತೀಚೆಗಷ್ಟೇ ಪ್ರಧಾನಿಯವರನ್ನು ಹಾಡಿಹೊಗಳಿದ್ದ ಅಣ್ಣಾಮಲೈ ಅವರು ಮೋದಿಯವರ ಫೋಟೋವನ್ನು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿ, ನಮಸ್ಕರಿಸಿದ್ದಾರೆ.

ಈ ಅನೌಪಚಾರಿಕ ಭೇಟಿಯ ಸಂಧರ್ಭದಲ್ಲಿ ಉಭಯ ರಾಷ್ಟ್ರಗಳ ಸಂಬಂಧಗಳ ವೃದ್ಧಿ, ಜಾಗತಿಕ ಹಾಗೂ ಪ್ರಾದೇಶಿಕ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ. ಇನ್ನು ಈ ಸಂದರ್ಭದಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ರದ್ದು ಮಾಡಿರುವ ವಿಷಯವೇನಾದರೂ ಬಂದರೆ ಅದಕ್ಕೆ ಸೂಕ್ತ ಕಾರಣವನ್ನು ಕೂಡಾ ಪ್ರಧಾನಿಯವರು ವಿವರಿಸಲಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆ ಚೀನಾ ಅಧಕ್ಷರ ಭಾರತದ ಭೇಟಿ ಮಾತ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here