ಬೆಂಗಳೂರು: ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತಿ ಸಡಗರ ಸಂಭ್ರಮದಿಂದ ಯಾವ ಜಾತಿ ಭೇದ ಭಾವವಿಲ್ಲದೆ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಕನ್ನಡದ ಹಬ್ಬವನ್ನು ಆಚರಿಸಲಾಗುತ್ತಿದೆ.
ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು, ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.
68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಿಸಿದ್ದಾರೆ.
ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.