ಬೆಂಗಳೂರು: ಬಿಜೆಪಿ ಪಕ್ಷದವರು ಜಾರಿ ಮಾಡಿರುವಂತಹ NEP ಶೈಕ್ಷಣಿಕ ಪದ್ಧತಿಯನ್ನು ಮುಂದಿನ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು.
ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ.
NEP ಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲಾ NEP ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.