City Big News Desk.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದರು.
ಇಂದು ಕಾರ್ಗಿಲ್ ವಿಜಯ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಳೆ ಪ್ರವಾಹ ಪರಿಸ್ಥಿತಿ ಇನ್ನೂ ಕೈಮೀರಿ ಹೋಗಿಲ್ಲ, ಜಲಾಶಯಗಳಿಗೆ ನೀರು ತುಂಬುತ್ತಿರುವುದು ಸಂತೋಷದ ವಿಚಾರ. ರೈತರಿಗೆ ಮತ್ತು ಸರ್ಕಾರಕ್ಕೆ ಇದು ಖುಷಿಯ ಸಂಗತಿ.
ಜುಲೈ 31ರಿಂದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುವೆ. ಅಲ್ಲಿನ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ಸಭೆ ನಡೆಸಿ ಆಗಿರುವ ಹಾನಿಗಳು, ಸಂಕಷ್ಟದ ಬಗ್ಗೆ ವಿವರ ಕೇಳುತ್ತೇನೆ. ಈಗ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಿಲ್ಲ. ರಾಜ್ಯದ ಹಲವೆಡೆ ಮಳೆಯಾಗಿ ಡ್ಯಾಂಗಳು ತುಂಬಿ ಹರಿಯುತ್ತಿವೆ. ಆಲಮಟ್ಟಿ, ಕೆಆರ್ಎಸ್, ಕಬಿನಿ, ಹಾರಂಗಿ ಡ್ಯಾಂಗಳಿಗೆ ನೀರು ಬಂದಿದೆ. ರಾಜ್ಯದಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದೆ ಎಂದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಅಪಾಯ ಪೀಡಿತ ಪ್ರದೇಶಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧವಾಗಿದೆ. ಜನರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಬದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಉಪಸ್ಥಿತರಿದ್ದರು.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.