Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೆ.ಎ.ಎಸ್ ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ, ಉಚಿತ ತರಬೇತಿ

 

ದಾವಣಗೆರೆ:   ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಎಂ ತಾಂತ್ರಿಕ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಇವರು ನಡೆಸುವ ಕೆ.ಎ.ಎಸ್. ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಜುಲೈ 17 ರಿಂದ 26 ರವರೆಗೆ ರೂಂ ನಂ:104, 3ನೇ ಮಹಡಿ, ಇಂಜಿನಿಯರಿಂಗ್ ಬ್ಲಾಕ್,  ಜಿಎಂ ತಾಂತ್ರಿಕ ಮಹಾವಿದ್ಯಾಲಯ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ “ಉಚಿತ ಪರೀಕ್ಷಾಪೂರ್ವ ತರಬೇತಿ” ಯನ್ನು ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ದಿನಾಂಕ : 17-07-2023ರ ಬೆಳಿಗ್ಗೆ 10-00 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 7406323294 & 8618166204 ಯನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.