ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರು ರಾಜ ರಾಜಕಾರಣದಲ್ಲಿ ಒಂದಲ್ಲ ಒಂದು ವಿಷಯಕ್ಕೆ ಹೆಸರಾಗುತ್ತಲೇ ಇದ್ದಾರೆ.
ಹೌದು 2023 ನೆಯ ಲೋಕಸಭಾ ಚುನಾವಣೆಯಲ್ಲಿ ಡಾ. ಸುಧಾಕರ್ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಹುಮತದಿಂದ ಆಯ್ಕೆಗೊಂಡ ಪ್ರದೀಪ್ ಈಶ್ವರವರು ಈಗ ಕನ್ನಡ ಬಿಗ್ ಬಾಸ್ ಸೀಸನ್ ಹತ್ತರಲ್ಲಿ ಕಾಣಿಸಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ರಾಜ ರಾಜಕೀಯದಲ್ಲಿ ಪ್ರದೀಪ್ ಈಶ್ವರ್ ಅವರ ಮೇಲೆ ಹಲವಾರು ದೂರುಗಳು ಮಾಡುತ್ತಿದ್ದಾರೆ.
ಕಿರುತೆರೆ ರಿಯಾಲಿಟಿ ಶೋ ಬಿಗ್ಬಾಸ್ಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಭಾಗಿಯಾಗಿರುವ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರಿಗೆ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆಯಿಂದ ಲಿಖಿತ ದೂರು ನೀಡಿದೆ. ಶಾಸಕ ಸ್ಥಾನದಿಂದ ಪ್ರದೀಪ್ ಈಶ್ವರ್ ವಜಾಗೊಳಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜನಪ್ರಿಯ ಶಾಸಕ ಎಂದೇ ಖ್ಯಾತರಾಗಿರುವ ಪ್ರದೀಪ್ ಈಶ್ವರ್ ಅಚ್ಚರಿ ಎನ್ನುವಂತೆ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಇವರು ದೊಡ್ಮನೆಗೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಎರಡು ದಿನ ಕಾಯಿರಿ ನೋಡೋಣ ಎಂದಷ್ಟೇ ಅವರು ಹೇಳಿ ಅಚ್ಚರಿ ಮೂಡಿಸಿದ್ದರು. ಕೊನೆಗೂ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ.
ಅನಾಥ ಮಕ್ಕಳಿಗಾಗಿ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿರುವುದಾಗಿ ಹೇಳಿದ್ದಾರೆ. ಬಿಗ್ ಬಾಸ್ ನಿಂದ ಬಂದ ಹಣವನ್ನ ಅಪ್ಪಅಮ್ಮನಿಲ್ಲದ ಮಕ್ಕಳಿಗೆ ನೀಡಲು ನಿರ್ಧಾರ ಮಾಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ, ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿರೋ ವಿಚಾರವನ್ನು ಹಲವರು ಪ್ರಶ್ನೆ ಮಾಡಿದ್ದಾರೆ. ಸರ್ಕಾರಕ್ಕೆ ಸಾಮಾನ್ಯರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಜನಪ್ರತಿನಿಧಿಯಾಗಿ ಇಂತಹ ವೇಳೆಯಲ್ಲಿ ರಿಯಾಲಿಟಿ ಶೋಗೆ ಹೋಗಬಹುದಾ ಎಂದು ಹಲವರು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.