ಮೈಸೂರು ಉಳಿಸಿಕೊಂಡು, ಜೆಡಿಎಸ್​​ಗೆ 8 ಮಾತ್ರ ಬಿಟ್ಟುಕೊಡುವ ಮೂಲಕ ಸಿದ್ದರಾಮಯ್ಯ ಅವರು ಹತ್ತರಿಂದ ಹನ್ನೆರಡು ಕ್ಷೇತ್ರ ನಿರೀಕ್ಷೆ ಮಾಡಿದ್ದ ಜೆಡಿಎಸ್ ಕನಸಿಗೆ ಕೈ ಕೊಟ್ಟಿದ್ದಾರೆ. ಮೊನ್ನೆಯಷ್ಟೇ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರು ಕಾಂಗ್ರೆಸ್ ಹೈಕಮಾಂಡ್ ಜೊತೆ ಸುದೀರ್ಘ ಚರ್ಚೆ ನಡೆಸಿ ಕನಿಷ್ಠ ಹತ್ತು ಕ್ಷೇತ್ರ ಬಿಟ್ಟು ಕೊಡುವಂತೆ ಕೇಳಿದ್ದರು. ಆದರೆ ಇದೀಗ ಬಂದಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಜೆಡಿಎಸ್ ಗೆ ಎಂಟು ಕ್ಷೇತ್ರಗಳನ್ನು ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ‌. ಲೋಕಸಭಾ ಚುನಾವಣಾ ಸ್ಪರ್ಧೆಗೆ ದೋಸ್ತಿ ಸರ್ಕಾರ ಸೀಟು ಹಂಚಿಕೆ ಮಾಡಿಕೊಂಡಿವೆ. ಈ ನಡುವೆ ಮೈಸೂರು ಕ್ಷೇತ್ರಕ್ಕೆ ಪಟ್ಟು ಹಿಡಿದಿದ್ದ ಜೆಡಿಎಸ್​ಗೆ ತೀವ್ರ ಹಿನ್ನೆಡೆ ಉಂಟಾಗಿದೆ.

ಮೈಸೂರು ಕ್ಷೇತ್ರದಲ್ಲಿ ಇಲ್ಲಿಯವರೆಗೂ 16 ಬಾರಿ ಲೋಕಸಭಾ ಚುನಾವಣೆ ನಡೆದಿದೆ. ಈ ಚುನಾವಣೆಗಳಲ್ಲಿ 13 ಬಾರಿ ಕಾಂಗ್ರೆಸ್ ಗೆದ್ದಿದೆ. ಅಲ್ಲದೇ, ಪ್ರಸ್ತುತ ಈ ಕ್ಷೇತ್ರದಲ್ಲಿ ಇಬ್ಬರು ಜೆಡಿಎಸ್‌ ಸಚಿವರಿದ್ದಾರೆ. ಎಲ್ಲವೂ ಜೆಡಿಎಸ್‌ ನವರಿಗೇ ಅವಕಾಶ ನೀಡುತ್ತಾ ಹೋದ್ರೆ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಅಂತೆಲ್ಲಾ ಹೈಕಮಾಂಡ್​ಗೆ ಸಿದ್ದರಾಮಯ್ಯ ವಸ್ತುಸ್ಥಿತಿಯನ್ನು ಮನದಟ್ಟು ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆ ಇಂದಿನ ಚರ್ಚೆಯಲ್ಲಿ ರಾಹುಲ್​ಗಾಂಧಿ, ನಾವು ನಿಮಗೆ ಸಿಎಂ ಸ್ಥಾನವನ್ನೇ ಬಿಟ್ಟುಕೊಟ್ಟಿದ್ದೇವೆ ಎಂದು ಪ್ರಸ್ತಾಪಿಸಿದ್ದಾರೆ. ರಾಹುಲ್​ ಉತ್ತರಕ್ಕೆ ಮರು ಮಾತನಾಡದೆ ಜೆಡಿಎಸ್​, ಮೈಸೂರು ಕ್ಷೇತ್ರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಟ್ಟಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರವನ್ನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

 

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here