ರಾಜ್ಯದಲ್ಲಿ ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ರಾಜಕೀಯದಲ್ಲಿ ಕೂಡಾ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಲೇ ಇವೆ. ಕೊರೊನಾ ವಿಷಯದಲ್ಲಿ ಕಾಂಗ್ರೆಸ್ ರಾಜ್ಯಸರ್ಕಾರ ಬಿಜೆಪಿಯನ್ನು ಪ್ರತಿದಿನವೂ ಟೀಕೆ ಮಾಡುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೊರೊನಾ ಸೋಂಕು ನಿಯಂತ್ರಣದಲ್ಲಿ ವಿಫಲವಾಗಿದೆ ಎಂದು ಹೇಳಿದ್ದು, ಸರ್ಕಾರ ಕೊರೊನಾ ಹೆಸರಿನಲ್ಲಿ ಕೂಡಾ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪವನ್ನು ಮಾಡುವಾಗಲೇ, ಮತ್ತೊಂದೆಡೆ ಜೆಡಿಎಸ್ ನ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಮೇಲೆ ವಾಗ್ದಾಳಿಯನ್ನು ನಡೆಸಿದ್ದು, ಕಾಂಗ್ರೆಸ್ ಬಗ್ಗೆ ತೀವ್ರವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ.‌

ನಿನ್ನೆಯಷ್ಟೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕುದುರೆ ವ್ಯಾಪಾರ ಎಂಬುದು ಬಂದಿದ್ದೇ ಕಾಂಗ್ರೆಸ್ ನಿಂದ, ಕಾಂಗ್ರೆಸ್ ಕುದುರೆ ವ್ಯಾಪಾರಕ್ಕೆ ಅನ್ವರ್ಥ ನಾಮ ಎಂದು ಕೆಲವು ವಿಷಯಗಳನ್ನು ಹೇಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಹಲವು ಪ್ರಶ್ನೆಗಳನ್ನು ಹಾಕಿದ್ದರು. ಈಗ ಕುಮಾರ ಸ್ವಾಮಿ ಅವರ ಪ್ರಶ್ನೆಗಳು ಹಾಗೂ ಆರೋಪಕ್ಕೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದೆ. ಕರ್ನಾಟಕದ ಕಾಂಗ್ರೆಸ್ ತನ್ನ ಟ್ವೀಟ್ ನಲ್ಲಿ, “ಕುಮಾರಸ್ವಾಮಿ ಅವರೇ ಆಡಳಿತ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸ್ವಯಂ ಸೇರುವುದಕ್ಕೂ ಸಂವಿಧಾನ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಆಪರೇಷನ್ ಕಮಲದ ಮೂಲಕ ಚುನಾಯಿತ ಸರ್ಕಾರವನ್ನು ಕೆಡವುದಕ್ಕೂ ಇರುವ ವ್ಯತ್ಯಾಸ ಗೊತ್ತಿಲ್ಲದಷ್ಟು ಅತಿಮುಗ್ದರಾಗಿ ಬಿಟ್ಟಿರಾ?” ಎಂದಿದೆ.

ಮತ್ತೊಂದು ಟ್ವೀಟ್ ನಲ್ಲಿ, “ಕಾಂಗ್ರೆಸ್ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿ ಕುರ್ಚಿ ಮೇಲೆ ಕೂತು ಅಧಿಕಾರ ನಡೆಸುವಾಗ ನಿಮಗೆ ಕಾಂಗ್ರೆಸ್ ಪಕ್ಷದ ನೈತಿಕತೆ ಚೆನ್ನಾಗಿತ್ತು, ಅಧಿಕಾರ ಇಲ್ಲದಿದ್ದಾಗ ನೈತಿಕತೆ ಪ್ರಶ್ನೆ ಬರುತ್ತದೆಯೇ? ರಾಜ್ಯ ಸಂಕಷ್ಟದಲ್ಲಿರುವಾಗ ಅದೃಶ್ಯರು ಅಪ್ರಸ್ತುತರು ಆಗಿರುವ ನಿಮ್ಮ ಪಕ್ಷದ ನೈತಿಕತೆ ಏನು? ” ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಜೆಡಿಎಸ್ ನ ನೈತಿಕತೆಯನ್ನು ಪ್ರಶ್ನೆ ಮಾಡಿದೆ. ಅಲ್ಲದೆ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ನ ನೈತಿಕತೆ ನಿಮಗೆ ಚೆನ್ನಾಗಿತ್ತಲ್ಲವೇ ಎಂದು ವ್ಯಂಗ್ಯವಾಡಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here