ಇಂದು ರಾಜ್ಯ ರಾಜಕಾರಣದಲ್ಲಿ ಒಂದು ದೊಡ್ಡ ಸಂಚಲನವೇ ಉಂಟಾಗಿದೆ. ಮೈತ್ರಿ ಸರ್ಕಾರದ 14 ಶಾಸಕರು ಈಗಾಗಲೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರವನ್ನು ಉಳಿಸುವ ಪ್ರಯತ್ನಗಳು ಭರದಿಂದ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಅದಾಗಲೇ ಹೈಕಮಾಂಡ್ ಬೆಂಗಳೂರಿಗೆ ಕಳುಹಿಸಿದೆ. ಅವರು ರಾಜ್ಯ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರನ್ನು ಒಳಗೊಂಡಂತೆ, ಪ್ರಮುಖ ನಾಯಕರೊಂದಿಗೆ ವೇಣುಗೋಪಾಲ್ ಅವರು ಚರ್ಚೆಯನ್ನು ನಡೆಸಿದ್ದಾರೆ. ಚರ್ಚೆ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಖಡಕ್ ಸಂದೇಶವನ್ನು ನೀಡಿದ್ದರೆನ್ನಲಾಗಿದೆ.

ಅವರು ತಮ್ಮ ಮಾತಿನಲ್ಲಿ ಮೈತ್ರಿ ಸರ್ಕಾರವನ್ನು ಮುಂದುವರೆಸಿಕೊಂಡು ಹೋದರೆ ಅದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆ ಆಗಲಿದೆಯೆಂದಿದ್ದಾರೆ. ಸಿಎಂ ಮತ್ತು ಡಿಸಿಎಂ ಅವರು ಸರ್ಕಾರವನ್ನು ಉಳಿಸಿಕೊಳ್ಳಲಿ ಎಂದು ಹೇಳಿದ್ದಾರೆನ್ನಲಾಗಿದೆ. ಅಲ್ಲದೆ ಈಗಾಗಲೇ ಪರಿಸ್ಥಿತಿ ಕೈ ಮೀರಿದ್ದು, ಮೈತ್ರಿ ಮುರಿದುಕೊಳ್ಳುವುದು ಒಳ್ಳೆಯದು ಎಂದಿದ್ದಾರೆ ಎನ್ನಲಾಗಿದೆ. ಈ ಹಿಂದೆ ರಾಹುಲ್ ಗಾಂಧಿ ಅವರಿಗೂ ಸಿದ್ಧರಾಮಯ್ಯನವರು ನೇರವಾಗಿ ರಾಹುಲ್ ಅವರ ಮುಂದೆಯೇ ಮೈತ್ರಿಗೊಂದು ಕೊನೆ‌ ಹಾಡುವ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಸಿದ್ಧರಾಮಯ್ಯನವರಿಗೆ ಆಪ್ತರೆನಿಸಿದವರೇ ಈಗ ರಾಜೀನಾಮೆ ನೀಡಿದ್ದಾರೆ. ಶಾಸಕರ ರಾಜೀನಾಮೆ ಪ್ರಕ್ರಿಯೆ ನಂತರ, ಈ ವಿಷಯದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ, ಸಿದ್ಧರಾಮಯ್ಯನವರು ಶಾಸಕರ ಮನವೊಲಿಕೆಗೆ ಡಿಕೆ ಶಿವಕುಮಾರ್ ಅವರು ತೆರಳಿದ್ದು, ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ. ನಾನು ಕೂಡಾ ಈಗಾಗಲೇ ಶಾಸಕರಿಗೆ ಕರೆ ಮಾಡಿದ್ದೆ, ಆದರೆ ಶಾಸಕರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ..

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here