ದೇಶದೆಲ್ಲೆಡೆ ಕೊರೊನಾ ವೈರಸ್ ಭೀತಿ ಇರುವುದು, ಅದರಿಂದಾಗಿಯೇ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಹಿನ್ನೆಲೆಯಲ್ಲಿ ಬಹುತೇಕ ಎಲ್ಲರೂ ಮನೆಗಳಲ್ಲಿ ಕಾಲ ಕಳೆಯುವಂತಾಗಿದೆ. ಇದರಿಂದಾಗಿ ಜನರು ಮನರಂಜನೆಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ಕೆಲವರು ಇದೇ ಸಮಯವನ್ನು ದುರುಪಯೋಗ ಪಡಿಸಿಕೊಂಡು ಸುಳ್ಳು ಮಾಹಿತಿ, ಸುಳ್ಳು ಸಂದೇಶಗಳನ್ನು ಕೂಡಾ ಹಂಚಿಕೊಳ್ಳುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಅದನ್ನು ನಿಯಂತ್ರಿಸಲು ಪ್ರಮುಖವಾದ ನಿರ್ಧಾರವೊಂದನ್ನು ಮಾಡಿದೆ.

ಕೊರೊನಾ ಕುರಿತಂತೆ ಯಾರೇ ಆದರೂ, ತಪ್ಪು ಮಾಹಿತಿಯನ್ನು ಹಂಚಿದರೆ, ಅಂತಹವರಿಗೆ ದಂಡ ವಿಧಿಸುವುದರ ಜೊತೆಗೆ ಎರಡು ವರ್ಷಗಳ ಜೈಲು ಶಿಕ್ಷೆ ಕೂಡಾ ನೀಡಬಹುದು ಎಂದು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಯವರಾದ ಅಜಯ್​ ಕುಮಾರ್ ಭಲ್ಲಾ ಅವರು ದೇಶದ ಎಲ್ಲಾ ರಾಜ್ಯಗಳಿಗೂ ಕೂಡಾ ತಿಳಿಸಿದ್ದು, ಈ ವಿಷಯವನ್ನು ಅವರು ಟ್ವೀಟ್ ಕೂಡಾ ಮಾಡಿದ್ದಾರೆ. ಲಾಕ್ ಡೌನ್ ವೇಳೆಯಲ್ಲಿ ಕೆಲವರು ಕೊರೊನಾ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಸುಳ್ಳು ಮಾಹಿತಿ ಶೇರ್ ಮಾಡುತ್ತಿದ್ದು, ಜನರ ಮಾನಸಿಕ ನೆಮ್ಮದಿ ಹಾಳು ಮಾಡುವಂತೆ ಇದೆ.

ಆದ್ದರಿಂದಲೇ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್​ ವಾಟ್ಸ್​ ಅ್ಯಪ್​, ಟ್ವಿಟ್ಟರ್​ ಸೇರಿದಂತೆ ಹಲವು ಸೋಷಿಯಲ್​ ಮೀಡಿಯಾ ಫ್ಲಾಟ್​ ಫಾರ್ಮ್​ಗಳಲ್ಲಿ ಯಾರಾದರೂ ತಪ್ಪು ಮಾಹಿತಿ ಹಂಚುವ ಕೆಲಸವನ್ನು ಮಾಡಿದರೆ ಅಂತಹವರ ವಿರುದ್ಧ ಕೇಂದ್ರ ಗೃಹ ಇಲಾಖೆ ಸೂಕ್ತ ಹಾಗೂ ಶಿಸ್ತಿನ ಕ್ರಮಗಳನ್ನು ಕೈಗೊಳ್ಳಲು ಈ ಮೂಲಕ ಮುಂದಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here