ರಾಜ್ಯ ಆರೋಗ್ಯ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಅವರು ಆನ್ಲೈನ್ ಸುದ್ದಿ ಗೋಷ್ಠಿಯಲ್ಲಿ ಕೊರೊನಾ ವಿಷಯವಾಗಿ ಮಾಹಿತಿಯನ್ನು ನೀಡಿದ್ದು, ಅವರು ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾದವರ ಪ್ರಮಾಣವು ಒಂದೇ ವಾರದಲ್ಲಿ ರಾಜ್ಯದಲ್ಲಿ 50.72% ಮತ್ತು ಬೆಂಗಳೂರಿನಲ್ಲಿ 50.34% ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜುಲೈ 30 ರಂದು ರಾಜ್ಯದಲ್ಲಿ ಗುಣಮುಖ ಆದವರ ಪ್ರಮಾಣವು ಶೇ.39.36 ಇದ್ದರೆ, ಬೆಂಗಳೂರಿನಲ್ಲಿ ಶೇ.29.51 ರಷ್ಟಿತ್ತು. ಈಗ ಒಂದೇ ವಾರದ ಅವಧಿಯಲ್ಲಿ ಇದು11.37% ರಷ್ಟು ಮತ್ತು ಬೆಂಗಳೂರಿನಲ್ಲಿ 20.75 % ರಷ್ಟು ಹೆಚ್ಚಳವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಲಾಕ್ ಡೌನ್ ತೆರವುಗೊಳಿಸಿದ ನಂತರ ಇತರೆ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಆದರೆ ರಾಜ್ಯದಲ್ಲಿ ತೆಗೆದುಕೊಂಡ ಕಠಿಣವಾದ ಕ್ರಮಗಳಿಂದಾಗಿ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಎರಡೂ ಇಳಿಮುಖವಾಗಿದೆ ಎಂದು ತಿಳಿಸಿದ್ದಾರೆ ಸಚಿವರು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಮರಣ ಪ್ರಮಾಣ ಕಡಿಮೆಯಿದೆ ಎಂದು ತಿಳಿಸಿರುವ ಸಚಿವರು ಕರ್ನಾಟಕದಲ್ಲಿ ಕೊರೊನಾ ಸಾವಿನ ಪ್ರಮಾಣ ಪ್ರತಿ 10 ಲಕ್ಷಕ್ಕೆ 42 ಇದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here