ಬೆಂಗಳೂರು: ನಮ್ಮ ಗ್ರಾಮೀಣ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವಂತೆ ಮಾಡಲು ನಾನು ಪ್ರತ್ಯೇಕ ಕಾರ್ಯಕ್ರಮವನ್ನು ಆಲೋಚಿಸಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿಗಳ ಬಗ್ಗೆ ಚರ್ಚಿಸಿದ್ದೇನೆ. ಪ್ರತಿ ಎರಡು ಪಂಚಾಯ್ತಿಗಳನ್ನು ಸೇರಿಸಿ ಪಬ್ಲಿಕ್ ಶಾಲೆ ಆರಂಭಿಸಬೇಕು. ಅದಕ್ಕೆ ಬೇಕಾಗಿರುವ ಜಾಗವನ್ನು ಸರ್ಕಾರದ ವತಿಯಿಂದ ನೀಡುತ್ತೇವೆ. ನೀವು ಅಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಿ. ಪ್ರಮುಖ ಶಿಕ್ಷಣ ಸಂಸ್ಥೆಗಳು ಸರ್ಕಾರದ ಸಹಯೋಗದಲ್ಲಿ ಈ ಶಾಲೆಗಳ ಜವಾಬ್ದಾರಿ ವಹಿಸಿಕೊಳ್ಳುವಂತೆ ನಾವು ಮಾಡುತ್ತೇವೆ. ನೀವು ನಮಗೆ ಹಣ ನೀಡಬೇಡಿ, ನಾವು ಕಾರ್ಯಕ್ರಮದ ರೂಪುರೇಷೆ ನೀಡುತ್ತೇವೆ.