ಕಾಂಗ್ರೆಸ್ಸಿನಿಂದ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಡೈರಿ ಆರೋಪ ವಿಚಾರ, ಕಾಂಗ್ರೆಸ್ಸಿಗೆ 10 ಪ್ರಶ್ನೆ ಕೇಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಕಾಂಗ್ರೆಸ್ ಗೆ ಮುಂದಿಟ್ಟ ಪ್ರಶ್ನೆಗಳು:
1. ಡೈರಿ ನಿಮಗೆ ಸಿಕ್ಕಿದ್ದು ಯಾವಾಗ?
2. ಯಾರು ಈ ಡೈರಿಯನ್ನು ತಂದುಕೊಟ್ಟರು?
3. ಡೈರಿಯನ್ನು ಎಲ್ಲಿ ಕೊಟ್ಟರು?
4. ಒರಿಜಿನಲ್ ಡೈರಿ ಎಲ್ಲಿ?
5. ಏಕೆ ಇದುವರೆಗೂ ಈ ಡೈರಿ ಆದರಿಸಿ ಲೋಕಾಯುಕ್ತ ಅಥವಾ ಎಸಿಬಿಗೆ ದೂರು ಕೊಡಲಿಲ್ಲ?

6. 2013 ಮೇ ತಿಂಗಳಿನಿಂದ ನಿಮ್ಮದೇ ಪಕ್ಷದ ಆಡಳಿತ ಇದ್ದರೂ ಯಾವುದೇ ತನಿಖೆ ನಡೆಸದೇ ಇರಲು ಕಾರಣವೇನು?
7. ಯಡಿಯೂರಪ್ಪನವರದ್ದೆಂದು ಹೇಳಲಾದ ಡೈರಿಯು ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪತ್ತೆಯಾಗಿದ್ದು ಹೇಗೆ? ಇದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಬೇಕಾಗಿದೆ.
8. ಈ ಹಿಂದೆ ಪ್ರಕರಣವೊಂದರ ಬಗ್ಗೆ ಎಸಿಬಿಗೆ ದೂರು ನೀಡಿದ್ದ ಕಾಂಗ್ರೆಸ್ ಈಗ ಏಕೆ ದೂರು ನೀಡದಿರಲು ಕಾರಣವೇನು?
9 ಎಂಎಲ್ ಸಿ ಗೋವಿಂದರಾಜುಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡ ಡೈರಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಹಣ ಸಂದಾಯವಾಗಿತ್ತು ಎಂದು ನಮೂದಾಗಿತ್ತು. ಆಗ ಯಡಿಯೂರಪ್ಪ ಡೈರಿ ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಸೃಷ್ಟಿಯಾಗಿದ್ದು ನಿಜವಲ್ಲವೇ?
10. ಡೈರಿ ಪ್ರಕರಣ ಜನಲೋಕಪಾಲ್ ತನಿಖೆಗೆ ಸೂಕ್ತವಾದುದು ಎಂದು ಕಾಂಗ್ರೆಸ್ ಹೇಳುತ್ತಿದೆ. ಆರೋಪ ಮಾಡಿದವರು ದೂರು ನೀಡಬೇಕೆ ಅಥವಾ ದೂರಿಗೆ ಒಳಗಾದವರು ನೀಡಬೇಕೆ? ಎಂದು ಪ್ರಶ್ನಿಸಿದ್ದಾರೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here