ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ಅಸಂಖ್ಯಾರ ಕುಟುಂಬಗಳು ಸಂಕಷ್ಟಕ್ಕೆ ಗುರಿಯಾಗಿದ್ದು, ಸಂತ್ರಸ್ತರಿಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ. ಅವರು ಮಾಡಿರುವ ಘೋಷಣೆ ಸದ್ಯಕ್ಕೆ ನೆರೆ ಸಂತ್ರಸ್ತರಿಗೆ ಒಂದಷ್ಟು ಸಮಾಧಾನವನ್ನು ತರಬಹುದು. ಬದುಕು ಇಟ್ಟುಕೊಳ್ಳುವುದು ಸುಲಭದ ಕೆಲಸವಲ್ಲ, ಆದರೆ ಅದು ಅಸಾಧ್ಯವಲ್ಲ. ಆದರೆ ಅದಕ್ಕೆ ಸಮಯ ಬೇಕಾಗಿದ್ದು, ಸದ್ಯಕ್ಕೆ ಅಲ್ಲಿನ ಜನರಿಗೊಂದು ಧೈರ್ಯ ಹಾಗೂ ಭರವಸೆ ಬೇಕಿದ್ದು, ಮುಖ್ಯಮಂತ್ರಿಗಳ ಪರಿಹಾರ ಅದಕ್ಕೆ ಪೂರಕವಾಗಬಹುದು.

ಪ್ರವಾಹ ಸಂತ್ರಸ್ತರಿಗೆ ಮನೆ ರಿಪೇರಿ ಮಾಡಲು ಒಂದು ಲಕ್ಷ ರೂ. ನೆರವು ನೀಡುವುದಾಗಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಪ್ರಕಟಿಸಿದ್ದಾರೆ. ಅವರು ಇಂದು ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಕುಕ್ಕಾವು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಪ್ರವಾಹದಲ್ಲಿ ಮನೆಯನ್ನು ಸಂಪೂರ್ಣವಾಗಿ ಕಳೆದು ಕೊಂಡವರಿಗೂ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಪೂರ್ತಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ ಮಾಡಲು 5 ಲಕ್ಷ ರೂ.ಗಳ ಪರಿಹಾರ ಮಂಜೂರು ಮಾಡಲಾಗುವುದು ಹಾಗೂ ತುರ್ತಾಗಿ ಇಂದು ಸಂಜೆಯೊಳಗೆ 10 ಸಾವಿರ ರೂ. ನೀಡಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದರು.

ಇನ್ನು ಪ್ರವಾಹ ಸಂತ್ರಸ್ತರು ಸ್ವಂತ ಮನೆ ಮಾಡಿಕೊಳ್ಳುವವರೆಗೂ ಅವರು ಬಾಡಿಗೆ ಮನೆಯಲ್ಲಿ ವಾಸಿಸುವುದಾದರೆ ಪ್ರತಿ ತಿಂಗಳು 5 ಸಾವಿರ ರೂ. ನೀಡಲಾಗುವುದು ಎಂದು ಪ್ರಕಟಣೆ ನೀಡಿದ್ದಾರೆ. ಅದರ ಜೊತಗೆ ನಿವೇಶನ ರಹಿತರಿಗೆ ಸರಕಾರದಿಂದ ನಿವೇಶನ ನೀಡಲಾಗುವುದು ಎಂದು ಕೂಡಾ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಇದಕ್ಕೂ ಮೊದಲು ಯಡಿಯೂರಪ್ಪ ಅವರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಯಡಿಯೂರಪ್ಪ ಅವರಿಗೆ ವಿನಾಯಕನ ಉಡುಗೊರೆ ನೀಡಿದರು.

ಪ್ರವಾಹ ಸಂತ್ರಸ್ತರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ———-ಪ್ರವಾಹ ಸಂತ್ರಸ್ತರಿಗೆ ಮನೆ ರಿಪೇರಿ ಮಾಡಲು ಒಂದು…

Chief Minister of Karnataka यांनी वर पोस्ट केले सोमवार, १२ ऑगस्ट, २०१९

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here