ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾತು ಕಳೆದ ತಿಂಗಳು ಮೈಸೂರಿನಲ್ಲಿ ಅಪಘಾತಕ್ಕೀಡಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ , ದೇವರಾಜ್ ,ಪ್ರಜ್ವಲ್ ದೇವರಾಜ್ ಸೇರಿದಂತೆ ಹಲವರಿಗೆ ಗಾಯಗಳಾಗಿ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು‌. ದರ್ಶನ್ ಅವರ ಕಾರು ಅಪಘಾತ ಪ್ರಕರಣ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.ಇದೀಗ ನಟ ದರ್ಶನ್‌ ಕಾರು ಅಪಘಾತ ಪ್ರಕರಣ ಸಂಬಂಧ ಮೈಸೂರಿನ 4ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಅಪಘಾತ ಪ್ರಕರಣದ ಇಂಚಿಂಚೂ ಮಾಹಿತಿ ಕಲೆ ಹಾಕಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ವಿವಿ ಪುರಂ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಸೆ.23 ರಂದು ದರ್ಶನ್‌ ಕಾರು ಅಪಘಾತಕ್ಕಿಡಾಗಿದೆ. ಆ ಕಾರನ್ನ ಅವರ ಗೆಳೆಯ ಆಂಟೋನಿ ರಾಯ್‌ ಚಾಲನೆ ಮಾಡುತ್ತಿದ್ದರು. ರಿಂಗ್‌ರಸ್ತೆಯ ಜಂಕ್ಷನ್‌ ಬಳಿ ರಾಯ್‌ ಅವರ ನಿರ್ಲಕ್ಷ್ಯತನದಿಂದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ನಂತರ ಕಾರಿನಲ್ಲಿದ್ದ 5 ಮಂದಿಗೆ ಗಾಯಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಸಮಯದಲ್ಲಿ ದರ್ಶನ್‌ರಿಗೆ ಸಹಾಯ ಮಾಡಲು ಬಂದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಅವರಿಗೂ ಗಾಯಗಳಾಗಿದೆ. ಅವರು ಸಹ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಕಾರನ್ನ ಸರ್ಕಾರಿ ಆರ್‌ಟಿಓ ಅಧಿಕಾರಿಗಳು ಪರಿಶೀಲಿಸಿದ್ದು ಯಾವುದೇ ತಾಂತ್ರಿಕ ಕಾರಣದಿಂದ ಅಪಘಾತ ಆಗಿಲ್ಲ ಎಂದು ವರದಿ ನೀಡಿದ್ದಾರೆ. ಘಟನೆ ಸಂಬಂಧ ನಟರಾದ ದರ್ಶನ್‌, ದೇವರಾಜ್‌, ಪ್ರಜ್ವಲ್‌ದೇವರಾಜ್‌ ಚಾಲಕ ಆಂಟೋನಿ, ಕಾರಿನಲ್ಲಿದ್ದ ಪ್ರಕಾಶ್‌ ಎಂಬುವ ಹೇಳಿಕೆ ಪಡೆಯಲಾಗಿದೆ. ಎಲ್ಲರ ಹೇಳಿಕೆಯಲ್ಲೂ ಆಂಟೋನಿಯವರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಸಹಜ ಅಭಿಪ್ರಾಯ ಬಂದಿದೆ. ತಪ್ಪಿತಸ್ಥ ಚಾಲಕ ಆಂಟೋನಿ ರಾಯ್‌ ವಿರುದ್ದ ಕಾನೂನಿ ಪ್ರಕಾರ ಶಿಕ್ಷೆ ವಿಧಿಸಬೇಕು ಎಂದು ವಿವಿಪುರಂ ಸಂಚಾರ ಠಾಣಾ ಪೊಲೀಸರು ಮನವಿ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here