ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ಲಾಕ್ ಡೌನ್ ಆದೇಶ ಇದ್ದರೂ ಕೂಡಾ ಜನರು ಹೊರಗೆ ಬರುವ ಪ್ರಯತ್ನವನ್ನು ಮಾಡಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಅವರು ಮಾಡಿದ ಮನವಿಯನ್ನು ಕೂಡಾ ಲೆಕ್ಕಿಸದೆ ಜನರು ತಮ್ಮ ತಮ್ಮ ಊರುಗಳ ಕಡೆಗೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಜನರಿಗೆ ಸಂದೇಶವೊಂದನ್ನು ರವಾನೆ ಮಾಡುವ ಮೂಲಕ ಜನರಿಗೆ ಬುದ್ಧಿ ಮಾತನ್ನು ಹೇಳುತ್ತಾ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ.

ದರ್ಶನ್ ತಮ್ಮ ಪೋಸ್ಟ್ ನಲ್ಲಿ‌, ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ ಇಂದ ಪಾರಾಗುವುದು ನಮ್ಮ ಮೊದಲ ಆಧ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ. ಈ ಸೋಂಕು ರೋಗ ಬಹಳ ಅಪಾಯಕಾರಿ ಎಂಬುದು ನಿಮಗೆ ತಿಳಿದರೂ ಸಹ ತಮ್ಮ ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ.

ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ.’Common sense is not common’ ಎನ್ನುವ ಹಾಗೆ ಮಾಡಬೇಡಿ.

Please behave like a responsible citizen of the country.

ನಿಮ್ಮ ದಾಸ ದರ್ಶನ್ ಎಂದು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here