ಎಲ್ಲೆಲ್ಲೂ ಕೊರೊನಾ ಆತಂಕ, ಮತ್ತೊಂದೆಡೆ ಇಡೀ ದೇಶ ಲಾಕ್ ಡೌನ್. ಈ ಸಂದರ್ಭದಲ್ಲಿ ರೈತ ಕಂಗಾಲಾಗಿದ್ದಾನೆ. ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲ. ಮಾರುಕಟ್ಟೆಗೆ ಸಾಗಿಸಿ ಮಾರಾಟ ಮಾಡುವುದು ಸಾಧ್ಯವಿಲ್ಲ. ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿರು ರೈತರ ಸಮಸ್ಯೆಗೆ ಇನ್ನೂ ಸಮರ್ಪಕವಾದ ಉತ್ತರ ಸಿಕ್ಕಿಲ್ಲ. ದೇಶದ ಬೆನ್ನೆಲುಬು ಎಂದು ಕರೆಯುವ ರೈತನ ಜೀವನಕ್ಕೆ ಭದ್ರತೆ ಇಲ್ಲದಂತೆ ಆಗಿದೆ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲಿ, ಸಂಕಷ್ಟದಲ್ಲಿ ರೈನತ ನೆರವಿಗೆ ಬರುವಂತೆ ನಾಡಿನ ಜನರಲ್ಲಿ ಮನವಿಯೊಂದನ್ನು ಮಾಡಿದ್ದಾರೆ ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು‌.

ನಟ ದರ್ಶನ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಜನರಲ್ಲಿ ಮನವಿಯನ್ನು ಮಾಡಿದ್ದಾರೆ. ಅವರು ತಮ್ಮ ಟ್ವೀಟ್ ನಲ್ಲಿ “ದೇಶದಾದ್ಯಂತ ಲಾಕ್ ಡೌನ್ ಘೋಷಿಸಿರುವ ಕಾರಣ ರಾಜ್ಯದೆಲ್ಲೆಡೆ ಬೇಡಿಕೆಯಿಲ್ಲದೆ ರೈತರು ತಾವು ಬೆಳೆದ ತರಕಾರಿಯನ್ನು ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳು ಇಲ್ಲದೆ ಮಾರಾಟ ಮಾಡಲು ಮುಂದಾಗಿದ್ದು ಅವರ ಬಳಿ ತರಕಾರಿ ಖರೀದಿಸುವ ಮೂಲಕ ರೈತರನ್ನು ಉಳಿಸೋಣ. ಅವರಿಗೆ ಧಕ್ಕಬೇಕಾದ ಹಣವು ಅವರ ಪಾಲಾಗಲಿ ಎಂಬುದು ನನ್ನ ಆಶಯ ಧನ್ಯವಾದಗಳು”
ಎಂದಿದ್ದಾರೆ.

ದರ್ಶನ್ ಅವರ ಮಾತು ಅಕ್ಷರಶಃ ಸತ್ಯವಾಗಿದೆ. ಅನೇಕ ರೈತರು ಸಂಕಷ್ಟದಿಂದ ಅಸಮಾಧಾನಗೊಂಡು ತಮ್ಮ ಬೆಳೆಯನ್ನು ನೀರಿಗೆ ಎಸೆದಿದ್ದಾರೆ. ಕೆಲವರು ತಮ್ಮ ತೋಟದಲ್ಲೇ ಟ್ರಾಕ್ಟರ್ ಹತ್ತಿಸಿ ನಾಶ ಮಾಡಿದ್ದಾರೆ. ನಿನ್ನೆ ಒಬ್ಬ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಕರ್ಬೂಜ ಹಣ್ಣನ್ನು ಸುತ್ತ ಮುತ್ತಲಿನ ಹಳ್ಳಿಯ ಜನರಿಗೆ ಉಚಿತವಾಗಿ ಹಂಚಿದ್ದಾರೆ. ಒಟ್ಟಾರೆ ಅನ್ನದಾತರ ಜೀವನ ಲಾಕ್ ಡೌನ್ ನಿಂದ ದುಸ್ತರವಾಗಿದ್ದು, ಅವರಿಗೆ ನೆರವಿನ ತೀವ್ರ ಅಗತ್ಯ ಇದ್ದು, ಇದು ಅನಿವಾರ್ಯ ಕೂಡಾ ಆಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here