ರಾಜ್ಯದಲ್ಲಿ ಹೆಚ್ಚುತ್ತಿರುವ ಮಾರಕ ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರವು ಒಂದು ಮಹತ್ವದ ನಿರ್ಧಾರವನ್ನು ಮಾಡಿದ್ದು, ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿ ಇರಿಸಿಕೊಂಡು, ಪದವಿ ತರಗತಿಗಳ 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವಂತಹ ಎಲ್ಲಾ ಮಧ್ಯಂತರ ಸೆಮಿಸ್ಟರ್ ಗಳ ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ತೇರ್ಗಡೆ ಮಾಡುವುದಾಗಿ ಪ್ರಕರಣೆಯನ್ನು ಹೊರಡಿಸಿದೆ.‌

ಇದೇ ಸಂದರ್ಭದಲ್ಲಿ ಮತ್ತೊಂದು ವಿಷಯ ಕೂಡಾ ಸ್ಪಷ್ಟಪಡಿಸಿದ್ದು, ಇದೇ ಸೆಪ್ಟೆಂಬರ್ ಕೊನೆಯೊಳಗಾಗಿ ಪರೀಕ್ಷೆಯ ಜೊತೆಗೆ ಪ್ರಸಕ್ತ ಶಿಕ್ಷಣಿಕ ವರ್ಷದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಯುಜಿಸಿ ನೀಡುವ ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಲಾಗಿದೆ.‌ ಈ ನಿರ್ಧಾರವನ್ನು ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಪರಿಗಣಿಣಿ ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜೊತೆ ನಿರಂತರ ಚರ್ಚೆ ಹಾಗೂ ಸಮಾಲೋಚನೆಗಳನ್ನು ನಡೆಸಿ ಅನಂತರ ತೆಗೆದುಕೊಳ್ಳಲಾಗಿದೆ‌ ಎನ್ನಲಾಗಿದೆ.

ಈ ಮಹತ್ವದ ನಿರ್ಧಾರವನ್ನು ಮಾಡುವ ಮೊದಲು ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಂಡಿರುವುದಾಗಿ, ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರವೇ ಸೀಮಿತವಾಗಿರುತ್ತದೆ ಎಂದು ಕೂಡಾ ತಿಳಿಸಲಾಗಿದೆ‌.‌ ಸರ್ಕಾರ ಮಾಡಿರುವ ಈ ನಿರ್ಧಾರಕ್ಕೆ ಕುಲಾಧಿಪತಿ ಕೂಡಾ ಆಗಿರುವಂತಹ ರಾಜ್ಯದ ರಾಜ್ಯಪಾಲರಾದ ವಜೂಭಾಯಿ ವಾಲ ಅವರ ಅನುಮತಿ ದೊರೆತಿದೆ ಎಂದು‌ ರಾಜ್ಯ ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಕೂಡಾ ಆಗಿರುವ ಮಾನ್ಯ
ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here