ಬೆಂಗಳೂರು: ಕರ್ನಾಟಕ ರಾಜ್ಯ ಮಾತ್ರವಲ್ಲದೆ ಇಡೀ ದೇಶವೇ ಚಂದ್ರಯಾನ 3 ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಇನ್ನು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಆಗಿರುವ ಡಿಕೆ ಶಿವಕುಮಾರ್ ಅವರು, ಭಾರತಕ್ಕೆ ಇದು ಸಂತಸದ ದಿನ. ಚಂದ್ರಯಾನ ಯಶಸ್ವಿಯಾಗುತ್ತದೆ. ನಾನು ಸಮಯ ಮಾಡಿಕೊಂಡು ವೀಕ್ಷಣೆ ಮಾಡುತ್ತೇನೆ. ಇದಕ್ಕೆ ಶ್ರಮ ಪಟ್ಟವರಿಗೆ ಕರ್ನಾಟಕ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ವಿಜ್ಞಾನಿಗಳ ಕೆಲಸಕ್ಕೆ ಶುಭ ಕೋರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಹಾಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೂಡ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ಇಸ್ರೋ ವಿಶ್ವ ದರ್ಜೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು, ದಶಕಗಳಿಂದ ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಅವರ ಅಮೋಘ ಸಾಧನೆಗಳು ನಮ್ಮನ್ನು ವಿಶ್ವದ ಅಗ್ರಸ್ಥಾನದಲ್ಲಿರಿಸಿದೆ. ದೇವರು ನಮ್ಮ ರಾಷ್ಟ್ರ ಮತ್ತು ನಮ್ಮ ವಿಜ್ಞಾನಿಗಳನ್ನು ಆಶೀರ್ವದಿಸಲಿ. ಚಂದ್ರಯಾನ 3 ಯಶಸ್ವಿಯಾಗಲಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಶುಭ ಹಾರೈಸಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.