ಆಗಸ್ಟ್ 15 ರ ಶನಿವಾರ ಭಾರತದ ಸ್ವತಂತ್ರ ದಿನಾಚರಣೆ. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಆಚರಣೆಯಲ್ಲೂ ಕೂಡಾ ಕಟ್ಟು ನಿಟ್ಟಾದ ನಿಯಮಗಳನ್ನು ಪಾಲನೆ ಮಾಡಲು ಮುಂದಾಗಿದೆ ಸರ್ಕಾರ‌‌. ಈ ಬಾರಿಯ ಸ್ವಾಂತಂತ್ರ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಎಲ್ಲಾ ರೀತಿ ಸಿದ್ಧತೆಗಳು ಆರಂಭವಾಗಿದೆ. ಕೊರೊನಾ ಆತಂಕದ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಕೆಂಪು ಕೋಟೆಯಲ್ಲಿ ದ್ವಜಾರೋಹಣವನ್ನು ಮಾಡಲಾಗುವುದು ಎನ್ನಲಾಗಿದೆ. ಪೊಲೀಸ್ ಸಿಬ್ಬಂದಿ ಕೂಡ ಸ್ವತಂತ್ರ ದಿನಾಚರಣೆಯ ತಯಾರಿಗಳನ್ನು ನಡೆಸುತ್ತಿದ್ದಾರೆ.

ಅಲ್ಲದೇ ಎರಡು ವಾರಗಳ ಮೊದಲು ಕೊರೊನಾ ಲಕ್ಷಣಗಳನ್ನ ಹೊಂದಿದ್ದ ಸಿಬ್ಬಂದಿಯು ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಬರುವುದು ಬೇಡವೆಂದು ದೆಹಲಿ ಪೊಲೀಸ್ ಇಲಾಖೆ ಸೂಚನೆಯನ್ನು ಹೊರಡಿಸಿದೆ. ಕಾರ್ಯಕ್ರಮಕ್ಕೆ ಆಗಮಿಸಲಿರುವ ಅತಿಥಿಗಳು ಕೂಡಾ ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಸಚಿವಾಲಯವು ನೀಡಿರುವಂತಹ ಮಾರ್ಗಸೂಚಿಗಳನ್ನು ಪಾಲಿಸುವಂತೆ ಪೋಲಿಸರು ಮನವಿಯನ್ನು ಮಾಡಿದ್ದಾರೆ.

ಸ್ವಾತಂತ್ರ್ಯೋತ್ಸವದ ದಿನಕ್ಕೆ ಎರಡು ವಾರಗಳ ಅವಧಿಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಯಾರಲ್ಲಾದರೂ ಕಂಡು ಬಂದಿದ್ದು, ಅವರ ಪರೀಕ್ಷಾ ವರದಿ ಇನ್ನೂ ಬಂದಿಲ್ಲ ಎನ್ನುವುದಾದರೆ ಅಂತಹವರು ಕೂಡಾ ಈ ಕಾರ್ಯಕ್ರಮಕ್ಕೆ ಬರಬಾರದು ಎಂದು ಸಿಬ್ಬಂದಿ ಹಾಗೂ ಅತಿಥಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆ ವಿಭಿನ್ನವಾಗಿ ಕಟ್ಟು ನಿಟ್ಟಿನ ಹಾಗೂ ಮುಂಜಾಗ್ರತಾ ಕ್ರಮಗಳೊಂದಿಗೆ ನಡೆಯುತ್ತಿದೆ ಎನ್ನಬಹುದು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here