ಇತ್ತೀಚಿಗೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಗಳ ಪ್ರಶ್ನ ಪತ್ರಿಕೆಗಳು ಸೋರಿಕೆಯಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಮೊದಲೇ ಪ್ರಶ್ನೆ ಪತ್ರಿಕೆ ಸಿಕ್ಕಿ ಈ ವಿಷಯ ಮಾದ್ಯಮಗಳ ಮೂಲಕ ಸುದ್ದಿಯಾಗಿತ್ತು ಹಾಗೂ ಈ ವಿಷಯವನ್ನು ಶಿಕ್ಷಣ ಸಚಿವರ ಗಮನಕ್ಕೆ ಕೂಡಾ ತರುವ ಪ್ರಯತ್ನವನ್ನು ಕೂಡಾ ಮಾಡಲಾಗಿತ್ತು‌. ಈ ಪ್ರಶ್ನೆ ಪತ್ರಿಕೆಗಳ ಸೋರಿಕೆಯ ವಿಚಾರವಾಗಿ ಪ್ರಾಥಮಿಕ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಮಾದ್ಯಮಗಳ ಮುಂದೆ ಶ್ರೀ ರಂಗಪಟ್ಟಣದಲ್ಲಿ ಅವರು ಇದರ ಬಗ್ಗೆ ಮಾತನಾಡಿದ್ದಾರೆ‌.

ಸುರೇಶ್ ಕುಮಾರ್ ಅವರು ಮಾತನಾಡುತ್ತಾ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದಿರುವ ಅವರು ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗಳು ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಎಚ್ಚರ ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ದೆಹಲಿ ಮಾದರಿಯಲ್ಲಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ವಿಚಾರದ ಬಗ್ಗೆ ಕೂಡಾ ಕೆಲವು ವಿಚಾರಗಳನ್ನು ಮಾತನಾಡಿದ್ದಾರೆ.

ರಾಜ್ಯದಲ್ಲಿ ಶಾಲೆಗಳ ಸಂಖ್ಯೆ ಹೆಚ್ಚಾಗಿದೆ. ಎಲ್ಲಾ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ನೀಡಲು ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದಿರುವ ಅವರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭವಾಗಿ ಹದಿನೈದು ವರ್ಷಗಳೇ ಕಳೆದಿದ್ದು, ಇನ್ನೂ ಸ್ವಂತ ಕಟ್ಟಡ ಇಲ್ಲದಿರುವುದು ವಿಪರ್ಯಾಸ ಎಂದಿರುವ ಅವರು ಆದಷ್ಟು ಬೇಗ ಈ ವಿಚಾರದ ಬಗ್ಗೆ ಗಮನವನ್ನು ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here