ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ದೇವೇಗೌಡರು ತಾವು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿನ, ದ್ವೇಷದ ರಾಜಕಾರಣಕ್ಕೆ ಸಂಬಂಧಿಸಿದಂತೆ, ಇದೇ ಜೂನ್ 29 ರಂದು, ಸಿಎಂ ಯಡಿಯೂರಪ್ಪ ಅವರ ಮನೆ ಮುಂದೆ ಧರಣಿ ಕೂರುತ್ತೇನೆಂದು ಒಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅವರು ತಮ್ಮ ಪ್ರಕಟಣೆಯ ಮೂಲಕ ತಮ್ಮ ಈ ಧರಣಿಗೆ ಕಾರಣವೇನೆಂದು ಎಂಬುದನ್ನು ಕೂಡಾ ವಿವರವಾಗಿ ತಿಳಿಸಿದ್ದಾರೆ. ಇಷ್ಟಕ್ಕೂ ದೇವೇಗೌಡರು ಧರಣಿ ಮಾಡುವು ಕಾರಣವೇನೆಂದು ತಿಳಿಯೋಣ.

ಪ್ರಕಟಣೆ ಹೊರಡಿಸಿರುವ ಹೆಚ್.ಡಿ ದೇವೇಗೌಡರು ಅದರಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ದ್ವೇಷದ ರಾಜಕಾರಣ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅವರು ನನ್ನ 60 ವರ್ಷದ ರಾಜಕೀಯ ಜೀವನಾವಧಿಯಲ್ಲಿ ಕಂಡಿಲ್ಲದಂತಹ ಕೆಟ್ಟ ರಾಜಕಾರಣ ನಡೆಯುತ್ತಿದೆ ಎಂದು ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಜೆಡಿಎಸ್​ ಪಕ್ಷದ ಸಾಮಾನ್ಯ ಕಾರ್ಯಕರ್ತನಾದ ಹೆಚ್.ಟಿ ಮಂಜು, ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು ಚುನಾವಣಾ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ.

ಮಂಜು ಬಳಿ ಎಲ್ಲಾ ಇಲಾಖೆಗಳ ಅನುಮತಿ ಇದ್ದರೂ, ಸ್ಟೋನ್ ಕ್ರಷರ್ ಮತ್ತು ಕ್ವಾರಿ ಬಿಸಿನೆಸ್​​ ನಡೆಸಲು ಕಿರುಕುಳ ನೀಡಲಾಗುತ್ತಿದೆ. ಸರ್ಕಾರ ಈ ಬಗ್ಗೆ ಪಾರದರ್ಶಕತೆ ತೋರಿಸದಿದ್ದರೆ ಧರಣಿ ಮಾಡುವುದಾಗಿ ಅವರು ತಿಳಿಸಿದ್ದು, ಅದರ ವಿರುದ್ಧವೇ ತಾನು ಸಿಎಂ ಯಡಿಯೂರಪ್ಪ ಅವರ ಮನೆಯ ಮುಂದೆ ಧರಣಿ ಕೂರುವುದಾಗಿ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here