ದೇವೇಗೌಡರ 87 ನೇ ಜನ್ಮದಿನಕ್ಕಾಗಿ ದೇವೇಗೌಡರು ಪ್ರತಿವರ್ಷ ತಮ್ಮ ಹುಟ್ಟು ಹಬ್ಬವನ್ನು ತಿರುಪತಿಯಲ್ಲಿ ಆಚರಿಸುವುದರಿಂದ ಅವರು ಕುಟುಂಬ ಸಮೇತರಾಗಿ ತಿರುಪತಿಗೆ ಹೋಗಿದ್ದಾರೆ. ಅಲ್ಲಿ ಸುದ್ದಿಗಾರರದೊಂದಿಗೆ ಮಾತನಾಡಿದ ಮಾನ್ಯ ಸಿಎಂ ಕುಮಾರಸ್ವಾಮಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಕೂಟ 18 ಕ್ಷೇತ್ರಗಳಲ್ಲಿ ಗೆಲ್ಲುತ್ತದೆಂದು ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರಿಗೆ ಮಾತು ನೀಡಿದ್ದು ಅದರ ಪ್ರಕಾರ ನಮ್ಮ ಮೈತ್ರಿ ಕೂಟ 18 ಸ್ಥಾನ ಗೆಲ್ಲುತ್ತದೆಯೆಂಬ ನಂಬಿಕೆ ಇದೆ ಮಾತ್ರವಲ್ಲದೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಗಳು ಮೂಡುವುದಿಲ್ಲ ಎಂದವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು, ನಾನು ಹೆಚ್ಚಿಗೆ ಏನೂ ಹೇಳುವುದಿಲ್ಲ. ನಾವು ಕಾಂಗ್ರೆಸ್ ಜೊತೆ ಇದ್ದೇವೆ ಆದ್ದರಿಂದ ಫಲಿತಾಂಶ ಪ್ರಕಟ ಆಗುವವರೆಗೂ ಎಲ್ಲರೂ ಕಾಯಲೇಬೇಕೆಂದು ಹೇಳಿದ್ದಾರೆ. ಇಂದು ಜೆಡಿಎಸ್ ವರಿಷ್ಠ ದೇವೇಗೌಡರ 87 ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ದೇವೇಗೌಡರು ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ. ದೇವೇಗೌಡರ ಕುಟುಂಬ ನಿನ್ನೆ ಸಂಜೆ ವಿಶೇಷ ವಿಮಾನದಲ್ಲಿ ತಿರುಪತಿಗೆ ತೆರಳಿದ್ದು, ದೇವೇಗೌಡರು, ಚೆನ್ನಮ್ಮ, ಸಿಎಂ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಸೇರಿದಂತೆ 23 ಜನ ಕುಟುಂಬ ಸದಸ್ಯರು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಇಂದು ಬೆಳಗ್ಗೆ 5 ಗಂಟೆಗೆ ದೇವೇಗೌಡರು ತಿರುಪತಿ ತಿಮ್ಮಪ್ಪನಿಗೆ ಸುಪ್ರಭಾತ ಸೇವೆ ಸಲ್ಲಿಸಿದರು.
ದೇವೇಗೌಡರು ಪ್ರತಿ ಹುಟ್ಟುಹಬ್ಬಕ್ಕೆ ತಿರುಪತಿಗೆ ತೆರಳಿ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ ಈ ಬಾರಿ ಅದಕ್ಕೆ ವಿಶೇಷ ಮಹತ್ವ ಇದೆ. ಏಕೆಂದರೆ ಈ ಭಾರಿ ಗೌಡರ ಕುಟುಂಬಕ್ಕೆ ಒಂದು ನಿರ್ಣಾಯಕ ಫಲಿತಾಂಶ ಬರಲಿದೆ. ದೇವೇಗೌಡರು ಮಾತ್ರವಲ್ಲದೆ, ಅವರ ಇಬ್ಬರು ಮೊಮ್ಮಕ್ಕಳ ರಾಜಕೀಯ ಭವಿಷ್ಯ ಕೂಡಾ ಇದೇ ಮೇ 23 ಕ್ಕೆ ಹೊರ ಬೀಳಲಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here