ಕೆ.ಜಿ. ಹಳ್ಳಿ ಘಟನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಸನ್ಮಾನ್ಯ ಹೆಚ್‌.ಡಿ ದೇವೇಗೌಡ ಅವರು ಇಂದು, ಶಾಸಕರು ಮತ್ತು ಜಿಲ್ಲಾಧ್ಯಕ್ಷರ ಜೊತೆ ವಿಡಿಯೋ ಕಾನ್ಫರೆನ್ಸ್ ಅನ್ನು ನಡೆಸಿದ್ದು, ಈ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ, ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಅವರು ಭಾಗಿಯಾಗಿದ್ದರು. ಈ ವೀಡಿಯೋ ಕಾನ್ಫರೆನ್ಸ್ ಗೆ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಜೆಪಿ ನಗರದ ನಿವಾಸದಿಂದಲೇ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹೆಚ್.ಡಿ.ಕೆ ಮಾತನಾಡುತ್ತಾ ಘಟನೆಯ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಮಾತನಾಡುತ್ತಾ ಕೆಜಿ ಹಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ ನವರು ಡ್ಯಾಮೇಜ್ ಮಾಡಿಕೊಂಡಿದ್ದು, ಅದೇ ಕಾರಣದಿಂದ ಅವರು ಈ ವಿಷಯದ ಬಗ್ಗೆ ಮಾತನಾಡಲು ಧ್ವನಿ ಎತ್ತುತ್ತಿಲ್ಲ ಎಂದಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಕೂಡಾ ಇದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ ಎಂದು ಹೇಳಿದ್ದಾರೆ. ಅನಂತರ ಮಾತನಾಡಿದ ದೇವೇಗೌಡರು ಜೆಡಿಎಸ್ ಜಾತ್ಯಾತೀತ ಪಕ್ಷ, ಅಲ್ಪಸಂಖ್ಯಾತರನ್ನು ಬಿಟ್ಟು ಕೊಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ. ಈ ಘಟನೆಯಲ್ಲಿ ಮುನ್ನೂರು ಜನ ಅಲ್ಪ ಸಂಖ್ಯಾತರನ್ನು ಬಂಧಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ಕೂಡಾ ನಿಪರಾಧಿಗಳಿಗೆ ಕಿರುಕುಳ ಉಂಟಾಗಬಾರದು ಎಂದಿದ್ದಾರೆ.

 

ಹೈಕೋರ್ಟ್​ನ ಹಾಲಿ ನ್ಯಾಯ ಮೂರ್ತಿಗಳಿಂದ ತನಿಖೆ ನಡೆಯಬೇಕು ಎಂದು ಹೇಳಿರುವ ದೇವೇಗೌಡರು, ಕಾಂಗ್ರೆಸ್ ಹಾಗೂ ಬಿಜೆಪಿ ಈ ಎರಡೂ ಪಕ್ಷಗಳೂ ಕೂಡಾ ತಮ್ಮ ಅನುಕೂಲಕ್ಕೆ ತಕ್ಕ ರೀತಿಯಲ್ಲಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿವೆ ಎಂದು ಹೇಳಿದ್ದು ಈ ಬಗ್ಗೆ ರಾಜ್ಯಸಭೆಯಲ್ಲಿ ಹೋರಾಟ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here