ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ನೀಡುವ ಕುರಿತ ಬೆಳವಣಿಗೆಗಳಲ್ಲಿ ಎಂ.ಬಿ. ಪಾಟೀಲ ಅವರ ನಡೆ ರಾಜ್ಯದ ವೀರಶೈವ ಸಮುದಾಯದ ಕಣ್ಣು ಕೆಂಪಗಾಗಿಸಿದೆ. ಮೊದಲೇ ನನ್ನನ್ನು ಲಿಂಗಾಯತ ವಿರೋಧಿ ಎಂದು ಬಣ್ಣಿಸಲಾಗಿದ್ದು, ಮತ್ತೆ ಆ ಕುರಿತ ಆರೋಪಗಳಿಗೆ ಎಡೆ ಮಾಡಿಕೊಡುವುದಕ್ಕೆ ಇಷ್ಟವಿಲ್ಲ

ಎಂಬ ಕಾರಣದಿಂದ ದೇವೇಗೌಡರು ಎಂ.ಬಿ. ಪಾಟೀಲ ಅವರನ್ನು ಸಂಪುಟದಿಂದ ದೂರ ಇರಿಸುವಂತೆ ಬೇಡಿಕೆ ಇರಿಸಿದ್ದಾರೆ. ಮತ್ತು
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಡಿ.ಕೆ. ಶಿವಕುಮಾರ್‌ ಅವರನ್ನೂ ಸಂಪುಟಕ್ಕೆ ಸೇರಿಸಿಕೊಂಡರೆ, ಜೆಡಿಎಸ್‌ ಬಗ್ಗೆ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ.

ಹಾಗಾಗಿ, ಅವರನ್ನೂ ಸಚಿವ ಸ್ಥಾನದಿಂದ ದೂರ ಇರಿಸುವಂತೆ ದೇವೇಗೌಡರು ಕಾಂಗ್ರೆಸ್‌ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.ಆದರೆ
ಈ ಎಲ್ಲಾ ಊಹಪೋಹಗಳಿಗೆ ಸ್ವತಃ ದೇವೇಗೌಡರು ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು
ರಾಜ್ಯದಲ್ಲಿ ರಚನೆ ಆಗಲಿರುವ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸರ್ಕಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ’

ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸಮ್ಮಿಶ್ರ ಸರ್ಕಾರದ ಯಾವುದೇ ಪ್ರಮುಖ ನಿರ್ಧಾರಗಳು, ಮಂತ್ರಿ ಮಂಡಲದ ರಚನೆ, ಸಮನ್ವಯ ಸಮಿತಿ ರಚನೆ ಹಾಗೂ ಸರ್ಕಾರದ ಆಡಳಿತ ವಿಚಾರದಲ್ಲಿ ಭಾಗಿ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here