ಬೆಂಗಳೂರು,ಸೆ.23: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಬುಡ ಮಟ್ಟದಲ್ಲಿಯೇ ಪರಿಹರಿಸುವ ಉದ್ದೇಶದಿಂದ ಸೆಪ್ಟೆಂಬರ್, 25 ರಂದು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
ಜನತಾದರ್ಶನ ಕಾರ್ಯಕ್ರಮವು ಮಧ್ಯಾಹ್ನ 3.00 ಗಂಟೆಗೆ ಆನೇಕಲ್ ತಾಲೂಕಿನ ಅತ್ತಿಬೆಲೆ ಹೋಬಳಿಯ ಸೂರ್ಯ ನಗರ, ರಂಗ ಮಂದಿರ ಮೊದಲನೇ ಹಂತ, ಕೆಎಚ್ಬಿ, ಸುರಾನ ಕಾಲೇಜು ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನೇಕಲ್ ಶಾಸಕರಾದ ಬಿ ಶಿವಣ್ಣ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರಾದ ಡಿ.ಕೆ ಸುರೇಶ್ ಅವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಳ್ಳುವರು.
ಆನೇಕಲ್ ತಾಲೂಕಿನ ರೈತರು, ಸಾಹಿತಿಗಳು, ಸ್ವತಂತ್ರ ಹೋರಾಟಗಾರರು, ಮಾಜಿ ಸೈನಿಕರು ಎಲ್ಲಾ ಸಮುದಾಯದ ಸಂಘಟನೆಗಳು, ಸಂಘ ಸಂಸ್ಥೆಗಳು ತಾಲೂಕಿನ ಎಲ್ಲಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು, ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಜನತಾದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ. ಎ. ದಯಾನಂದ ಅವರು ಕೋರಿದ್ದಾರೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.