ಈಗಿನ ಪರಿಸ್ಥಿತಿ ಅವಲೋಕಿಸಿದರೆ ಕರ್ನಾಟಕ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಉಳಿವು ನಮಗೆ ಅತ್ಯಂತ ಮಹತ್ವದ್ದಾಗಿದ್ದು ನಮ್ಮ ವೈಯಕ್ತಿಕ ಕಾರಣಗಳು ಸರ್ಕಾರಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ  ಸಲಹೆ ನೀಡಿದ್ದಾರೆ. ಮಾತಾಡುವಾಗ ಎಚ್ಚರಿಕೆ ವಹಿಸಬೇಕಾಗುತ್ತದೆ ದಂಗೆ ಹೇಳುವಂತೆ ಕರೆ ಕೊಡುತ್ತೇನೆ ಎಂಬ ಹೇಳಿಕೆಗಳನ್ನು ನೀಡಬಾರದು. ಈಗ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು ನಾವು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವ ಉಪಾಯ ಹುಡುಕಬೇಕು ಎಂದು ಕುಮಾರಸ್ವಾಮಿ ಅವರಿಗೆ ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ.

ನಿನ್ನೆ ತಡರಾತ್ರಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಜೊತೆ ಸಭೆ ನಡೆಸಿದ ಅವರು, ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡದಂತೆ ಡಿ ಕೆ ಶಿವಕುಮಾರ್ ಅವರಿಗೆ ಮನವರಿಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಗುರುವಾರ ರಾತ್ರಿ ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ಡಿಕೆಶಿ, ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ನಡುವೆ ಚರ್ಚೆ ನಡೆಸಿದ್ದು, ಈ ಸಭೆಯಲ್ಲಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಾಗಿದೆ.ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಡಿಕೆಶಿಗೆ ಸಾಫ್ಟ್​ ಪಾಲಿಟಿಕ್ಸ್​ ಬಗ್ಗೆ ಪಾಠ ಮಾಡಿದ್ದಾರೆ. ಜತೆಗೆ ನೀವು ಬೆಳಗಾವಿ ಜಿಲ್ಲೆಯ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ಸರಿಯಲ್ಲ. ರಾಮನಗರಕ್ಕೆ ಯಾರಾದರೂ ಬಂದರೆ ನಿಮಗೆ ಬೇಸರವಾಗುವುದಿಲ್ಲವೆ?

ಜತೆಗೆ ನೀವು ಪದೇ ಪದೇ ಸಿಎಂ ಅಭ್ಯರ್ಥಿ ಎಂದು ಹೇಳಿಕೆ ಕೊಡ್ತಿದೀರಾ. ಕೇವಲ 2 ಜಿಲ್ಲೆಗೆ ಸೀಮಿತವಾದ ನಾಯಕ ಸಿಎಂ ಅಭ್ಯರ್ಥಿ ಆಗ್ತಾನಾ ಎಂದು ಡಿಕೆಶಿಗೆ ಸಿದ್ದರಾಮಯ್ಯ ತಿಳಿಸಿದ್ದಾರೆ.ಚೆಸ್​ ಆಡ್ತೀನಿ, ಯಾವ ಪಾನ್​ ಹೇಗೆ ಸರಿಸಬೇಕು ಎಂದ ಗೊತ್ತಿದೆ ಅಂತಿದೀರಾ. ಆದರೆ, ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರ​ ಪಾನ್​ ಮುಟ್ಟಿದ್ದರೆ ಸುಮ್ಮನಿರುತ್ತಾರಾ. ಇದರ ಪರಿಣಾಮ ಏನಾಗಬಹುದು ಎಂಬುದನ್ನು ಯೋಚನೆ ಮಾಡಬೇಕು. ಜಾರಕಿಹೊಳಿ ಸಹೋದರರು ನಿಮಗೆ ರಾಜಕೀಯ ಸ್ಪರ್ಧಿಗಳಲ್ಲ. ನೀವು ಸಮ್ಮನೆ ವಿವಾದವನ್ನು ಏಕೆ ಮೈಮೇಲೆ ಎಳೆದುಕೊಳ್ಳುತ್ತೀರಾ. ಎಲ್ಲದಕ್ಕೂ ತೆರೆ ಎಳೆಯೋಣ ಸ್ವಲ್ಪ ಕೂಲಾಗಿರಿ ಎಂದು ಡಿಕೆಶಿಗೆ ಸಿದ್ದರಾಮಯ್ಯ ಪಾಠ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here