ಮಾಜಿ ಸಚಿವ, ಕಾಂಗ್ರೆಸ್ ‌ನ ನಾಯಕ ಡಿ.ಕೆ.ಶಿವಕುಮಾರ್ ಅವರು ಕಳೆದ ಮಾರ್ಚ್ 11 ರಂದು ಕೆಪಿಸಿಸಿ ಅಧ್ಯಕ್ಷನಾಗಿ ನೇಮಕಗೊಂಡಿದ್ದು ತಿಳಿಷ ವಿಷಯ‌ವೇ ಆದರೂ ಅವರಿನ್ನೂ ಅಧಿಕೃತವಾಗಿ ಅಧಿಕಾರವನ್ನು ಸ್ವೀಕರಿಸಿಲ್ಲ. ಈ ವಿಷಯವಾಗಿ ಅವರು ಮಾತನಾಡುತ್ತಾ ಸರ್ಕಾರವನ್ನು ಟೀಕೆ ಮಾಡಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ಸುದ್ದಿ ಗೋಷ್ಠಿ ನಡೆಸಿದ ಅವರು, ನಾನು ಮಾರ್ಚ್ 11 ರಂದು ಅಧ್ಯಕ್ಷನಾಗಿ ನೇಮಕಗೊಂಡಿದ್ದು, ಈಗ ಜೂನ್ 7 ರಂದು ನಾನು ಕೆಪಿಸಿಸಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮ ಮಾಡಬೇಡಿ ಎಂದು ಸರ್ಕಾರದವರು ತಿಳಿಸಿದ್ದಾರೆ. ಸರ್ಕಾರದ ಈ ಸೂಚನೆಯಿಂದಾಗಿ ನಾವು ಮಾಡಿಕೊಂಡಿದ್ದ ಎಲ್ಲಾ ಸಿದ್ಧತೆಗಳು ಕೂಡಾ ಹಾಳಾಗಿದೆ ಎಂದು ಅವರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಅಲ್ಲದೆ ಮಾತನಾಡುತ್ತಾ ಇದರ ಹಿಂದೆ ರಾಜಕೀಯ ಹುನ್ನಾರವಿದೆ ಎಂದು ಕೂಡಾ ಆರೋಪವೊಂದನ್ನು ಮಾಡಿದ್ದಾರೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾಡಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಸಂವಿಧಾನದ ಪೂರ್ವ ಪೀಠಿಕೆ ಯನ್ನು ಓದಿದ ನಂತರ ಗ್ರಾ.ಪಂ, ವಾರ್ಡ್ ಮಟ್ಟದಲ್ಲಿ 7,800 ಕಡೆ ವಂದೇ ಮಾತರಂ ಹಾಡುವ ಮೂಲಕ ಅಧಿಕಾರ ಸ್ವೀಕರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೆವು ಎಂದು ವಿವರಣೆ ನೀಡಿದ್ದಾರೆ.

ಅಲ್ಲದೆ ತಮ್ಮ ಈ ಯೋಜನೆಗಾಗಿ ಅವರು ಸರ್ಕಾರ, ಕಮೀಷನರ್ ಅವರ ಒಪ್ಪಿಗೆಯನ್ನೂ ಕೇಳಿದ್ದೆವು ಎಂದು ತಿಳಿಸಿದ್ದು, ಆದರೆ ಇದೀಗ ರಾಜಕೀಯ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ ಎಂದು ಕೇಂದ್ರ, ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿರುವ ಹಿನ್ನೆಲೆಯಲ್ಲಿ ಜೂನ್ 7ರ ಪದಗ್ರಹಣ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಮುಂದೆ ಹೊಸ ಡೇಟ್ ನೀಡುವುದಾಗಿ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಸ್ಥಾನ ಪಡೆದಿರುವ ಅವರು ಅಧಿಕೃತವಾಗಿ ಅಧಿಕಾರ ಸ್ವೀಕರಿಸುವ ದಿನ ಮುಂದೂಡಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here