ಕೊರೊನಾ ಲಾಕ್ ಡೌನ್ ನಿಂದಾಗಿ ದೇಶ ಆರ್ಥಿಕವಾಗಿ ಕುಸಿದಿದ್ದು, ದೇಶದ ಅಸಂಖ್ಯಾತ ಪ್ರಜೆಗಳು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.‌ ಇಂತಹ ಸಂಕಷ್ಟದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ದಿನ ಕಳೆಯುತ್ತಿರುವ ಜನರಿಗೆ ನೆರವು ನೀಡಲು, ದೇಶದ ಆರ್ಥಿಕತೆಯನ್ನು ಬಲಪಡಿಸಲು ಒಂದೆಡೆ ಕೇಂದ್ರ ಸರ್ಕಾರ, ಮತ್ತೊಂದೆಡೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಗಳನ್ನು ಘೋಷಣೆ ಮಾಡಿದೆ. ಈ ಪ್ಯಾಕೇಜ್ ಗಳ ಮೂಲಕ ಘೋಷಣೆ ಮಾಡಿರುವ ಪರಿಹಾರವನ್ನು ಸಂಕಷ್ಟದಲ್ಲಿದ್ದವರು ಬದುಕಿರುವಾಗಲೇ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತಾಗಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳು, ಆಟೋರಿಕ್ಷಾ, ಕ್ಯಾಬ್ ಚಾಲಕರ ನೋಂದಣಿ ಗೊಂದಲ ತಕ್ಷಣ ಬಗೆಹರಿಸಿ. ಅವರು ಬದುಕಿದ್ದಾಗಲೇ ಮಾಸಿಕ 10,000 ರುಪಾಯಿ ಪರಿಹಾರ ನೀಡಿ.
ಜಿಮ್, ಫಿಟ್ನೆಸ್ ಕೇಂದ್ರಗಳನ್ನು ತೆರೆಯಲು ಅವಕಾಶ ಮಾಡಿಕೊಡಿ” ಎಂದು ಟ್ವೀಟ್ ಮಾಡಿದ್ದಾರೆ.‌

ಡಿ.ಕೆ.ಶಿವಕುಮಾರ ಅವರು ಟ್ವೀಟ್ ಮೂಲಕ ಮುಖ್ಯಮಂತ್ರಿಯವರನ್ನು ಟ್ಯಾಗ್ ಮಾಡಿದ್ದಾರೆ. ಅವರ ಈ ಟ್ವೀಟ್ ಗೆ ಈಗಾಗಲೇ ಸಾಕಷ್ಟು ಪ್ರತಿಕ್ರಿಯೆಗಳು ಕೂಡಾ ಬಂದಿವೆ. ಇನ್ನು ಇದೇ‌ ವಿಚಾರವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿಶೇಷ ಆರ್ಥಿಕ ಪ್ಯಾಕೇಜ್ ವಿವರಣೆ ನೀಡುವ ಸಂದರ್ಭದಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ನೆರವು ನೀಡಲು 5000 ಕೋಟಿ ನೀಡಲಾಗುವುದು ಎಂದು ಹೇಳಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here