ಕರ್ನಾಟಕ ರಾಜ್ಯದಲ್ಲಿ ಒಂದು ಕಡೆ ಸಮ್ಮಿಶ್ರ ಸರ್ಕಾರ ಉರುಳಿಸಲು ಕಸರತ್ತು ನಡೆಯುತ್ತಿದೆ ಎಂಬ ಗುಮಾನಿಗಳು ಒಂದೆಡೆಯಾದರೆ ಮತ್ತೊಂದು ಕಡೆ ಕಾಂಗ್ರೆಸ್ ಪಕ್ಷದ ಒಳಗಡೆಯೇ ಆಂತರಿಕ ಜಗಳ ರಾಜ್ಯದ ಕಾಂಗ್ರೆಸ್ ನಲ್ಲಿ ಆತಂಕ ಸೃಷ್ಟಿ ಮಾಡಿದೆ.ಕರ್ನಾಟಕ ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಸಿದ್ದರಾಮಯ್ಯ , ಜಿ ಪರಮೇಶ್ವರ್ ಅವರ ಎರಡು ಬಣಗಳು ಇವೆ ಎಂಬ ಮಾತುಗಳ ನಡುವೆಯೇ ಭಗವಂತನ ಕೃಪೆ ಇದ್ದರೆ ನಾನು ಮುಖ್ಯಮಂತ್ರಿಯಾಗುತ್ತೇನೆ, ಅದಕ್ಕೆ ಯಾವುದೇ ಅವಸರವಿಲ್ಲ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರು ತಿಳಿಸಿದ್ದಾರೆ.

ಆಪರೇಷನ್​ ಲೋಟಸ್​ ಹೆಸರಿನಲ್ಲಿ ನಮ್ಮ ಶಾಸಕರನ್ನು ಸೆಳೆಯಲು ಯತ್ನಿಸಲಾಗುತ್ತಿದೆ. ಬಿ.ಸಿ. ಪಾಟೀಲ್​, ರಹೀಂ ಸೇರಿ 15-16 ಶಾಸಕರು, ಮಾಜಿ ಸಚಿವರನ್ನು ಸಂಪರ್ಕ ಮಾಡಿದ್ದಾರೆ. ಅರ್ಜೆಂಟ್​ ಆಗಿ ಹೋದರೆ ಅಪಘಾತವಾಗುತ್ತದೆ. ಹಾಗಾಗಿ ನಮ್ಮ ಸರ್ಕಾರ ನಿಧಾನವಾಗಿ ಹೋಗುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಸಮ್ಮಿಶ್ರ ಸರ್ಕಾರ ಈಗ ಸುಭದ್ರ ವಾಗಿದೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರದ ಶಾಶಕರನ್ನು ಬಿಜೆಪಿಯಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು

ಗಾಣಗಾಪುರ ದತ್ತಾತ್ರೇಯ ದೇಗುಲದ ಬಗ್ಗೆ ಕೇಳಿದ್ದೆ, ಆದರೆ ಇಲ್ಲಿಗೆ ಬಂದು ದೇವ ದರ್ಶನ ಪಡೆಯುವ ಭಾಗ್ಯ ಸಿಕ್ಕಿರಲಿಲ್ಲ. ಈ ಹಿಂದೆಯೇ ಇಲ್ಲಿಗೆ ಬರಬೇಕಿತ್ತು. ಆದರೆ ಎರಡು ಮೂರು ಬಾರಿ ಇಲ್ಲಿಗೆ ಬರುವುದು ಮುಂದೆ ಹೋಗಿತ್ತು. ಈಗ ಗಾಣಗಾಪುರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು, ಖುಷಿಯಾಗುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಎಲ್ಲಾ ಪರಿಸ್ಥಿತಿಯನ್ನು ಎದುರಿಸುವ ಶಕ್ತಿ ದೇವರು ಕೊಟ್ಟಿದ್ದಾನೆ  ಎಂದು ಸಚಿವ ಡಿ ಕೆ ಶಿವಕುಮಾರ್ ತಿಳಿಸಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here