ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಯಾರನ್ನು ಬೇಕಾದರೂ ಖರೀದಿಸಬಹುದು. ಆದರೆ, ದೇವೇಗೌಡರ ಕುಟುಂಬವನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಮಂಗಳವಾರ ಗುಡುಗಿದ್ದಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ 30 ಶಾಸಕರು ಬಂಡಾವೆದ್ದಿದ್ದು, ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಈ ಅಂಶವನ್ನು ಮರೆಮಾಚಲು ಡಿಕೆ ಶಿವಕುಮರ್ ಅವರು ಪ್ರಯತ್ನಿಸುತ್ತಿದ್ದಾರೆ. ಶಿವಕುಮಾರ್ ಯಾರಿಗೂ ಹೆದರುವುದಿಲ್ಲ, ದೆಹಲಿಯಲ್ಲಿ ಬಿಜೆಪಿ ನಾಯಕರನ್ನೂ ಖರೀದಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ