ನಟ ಧನಂಜಯ ಅವರು ಟಗರು ಚಿತ್ರದ ನಂತರ ಸಾಕಷ್ಟು ಜನಪ್ರಿಯತೆ ಪಡೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಧನಂಜಯ್ ಕೈಯಲ್ಲಿ ಸದ್ಯ ನಾಲ್ಕೈದು ಚಿತ್ರಗಳು ಚಿತ್ರೀಕರಣದಲ್ಲಿ ಇವೆ. ಅವುಗಳ ನಡುವೆಯೇ ಧನಂಜಯ್ ಅವರು ರತ್ನನ್ ಪ್ರಪಂಚಕ್ಕೆ ಕಾಲಿಟ್ಟಿದ್ದಾರೆ. ಧನಂಜಯ್ ಅಭಿನಯದ ಹೊಸ ಚಿತ್ರದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಕೆಜಿಎಫ್ ಚಿತ್ರದ ನಿರ್ಮಾಪಕರಾದ ಕಾರ್ತಿಕ್ ಗೌಡ ಅವರು ತಮ್ಮದೇ ಸ್ವಂತ ಪ್ರೊಡಕ್ಷನ್ ಹೌಸ್ ಆರಂಭಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯ.

ಇದೀಗ ಕೆ ಆರ್ ಜಿ ಸ್ಟುಡಿಯೋಸ್ ಮೂಲಕ ನಿರ್ಮಾಪಕರಾದ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಜೊತೆಯಾಗಿ ಸೇರಿ ಧನಂಜಯ್ ಅಭಿನಯದ ಹೊಸ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧನಂಜಯ್ ಅಭಿನಯದ ಹೊಸ ಸಿನಿಮಾದ ಪೋಸ್ಟರ್ ಸಹ ಲಾಂಚ್ ಆಗಿದೆ. “ರತ್ನನ್ ಪ್ರಪಂಚ” ಎಂಬ ವಿಭಿನ್ನ ಶೀರ್ಷಿಕೆಯಡಿ ನಿರ್ಮಾಣವಾಗುತ್ತಿರುವ ಈ ಸಿನಿಮಾವನ್ನು ರೋಹಿತ್ ಪಡಕಿ ನಿರ್ದೇಶನ ಮಾಡುತ್ತಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿಗಳು ಸದ್ಯದಲ್ಲೇ ದೊರೆಯಲಿದೆ ಎಂದು ನಿರ್ಮಾಪಕರಾದ ಕಾರ್ತಿಕ್ ಗೌಡ ತಿಳಿಸಿದ್ದಾರೆ. ರತ್ನನ್ ಪ್ರಪಂಚ ಚಿತ್ರದಲ್ಲಿ ಅವರು ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಇದೆ. ಸದ್ಯದಲ್ಲೇ ಮತ್ತಷ್ಟು ಮಾಹಿತಿಗಳು ರತ್ನನ್ ಪ್ರಪಂಚ ಚಿತ್ರದ ಬಗ್ಗೆ ದೊರೆಯಲಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here