City Big News Desk.
ಬೆಂಗಳೂರು : ರಾಜ್ಯದ ಶಾಲೆಗಳಿಗೆ ರಾಜ್ಯ ಸರ್ಕಾರವೇ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ವರದಿ ನೀಡಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಶಾಲಾ ಶಿಕ್ಷಣದಲ್ಲೂ ಎನ್ ಇಪಿ ಪಠ್ಯಕ್ರಮ ಚೌಕಟ್ಟಿಗೆ ಅನುಗುಣವಾಗಿ ಕರ್ನಾಟಕ ಪಠ್ಯಕ್ರಮ ಚೌಕಟ್ಟನ್ನು ರಚಿಸುವ ಪ್ರಕ್ರಿಯೆ ಹಿಂದಿನ ಸರ್ಕಾರದಲ್ಲಿ ಆರಂಭವಾಗಿತ್ತು. ಅದನ್ನು ನಿಲ್ಲಿಸಿ ರಾಜ್ಯ ಸರ್ಕಾರವೇ ಹೊಸ ಶಿಕ್ಷಣ ನೀತಿ ರಚನೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ಪಠ್ಯ ಪುಸ್ತಕದಲ್ಲಿ ಧಾರ್ಮಿಕತೆ ಹಾಗೂ ರಾಜಕೀಯ ಇರಬಾರದು. ಪಠ್ಯದಲ್ಲಿನ ಐಡಿಯಾಲಜಿ ಎಲ್ಲವನ್ನೂ ನಾವು ತೆಗೆದು ಹಾಕಿದ್ದೇವೆ. ಮುಂದಿನ ಶೈಕ್ಷಣಿಕ ವರ್ಷವೂ ನಾವು ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ಪಠ್ಯದಲ್ಲಿ ಅನೇಕ ಬದಲಾವಣೆ ಮಾಡುತ್ತೇವೆ.
ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡಿದ್ದೆ. ನನ್ನ ಮನವಿಯನ್ನು ಅನುಮೋದಿಸಿದ ಸಿದ್ದರಾಮಯ್ಯ ಅವರು, ವಾರದಲ್ಲಿ 2 ದಿನ ಮಕ್ಕಳಿಗೆ ಮೊಟ್ಟೆ ನೀಡಲು ಅನುಮೋದನೆ ನೀಡಿದ್ದಾರೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ.
ನಾನು ಅಧಿಕಾರಕ್ಕೆ ಬಂದಾಗ ನನ್ನಸೊರಬ ಕ್ಷೇತ್ರದ 52 ಶಾಲೆಗಳಲ್ಲಿ ಶಿಕ್ಷಕರೇ ಇರಲಿಲ್ಲ.ಎಷ್ಟೋ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ. ಮುಂದಿನ 8 ತಿಂಗಳಲ್ಲಿ ಕೆಲವೊಂದು ಪ್ಲಾನ್ ಮಾಡಿಕೊಂಡಿದ್ದೇನೆ.ವ್ಯವಸ್ಥೆ ಯಾವ ತರಹ ನಡೆಯುತ್ತೆ ಅಂತ ತಿಳಿದುಕೊಳ್ಳಬೇಕು ಎಂದರು.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.