ಜೆಡಿಎಸ್ ಪಕ್ಷದ ಹಾಲಿ ಶಾಸಕ ಮತ್ತು ಮಾಜಿ ಮಂತ್ರಿ ಜಿ.ಟಿ.ದೇವೇಗೌಡ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಿ.ಟಿ.ದೇವೇಗೌಡ್ರು ರಾಜಕೀಯ ನಿವೃತ್ತಿ ಹೇಳಿದರು. ಇನ್ನು ಜಿ.ಟಿ.ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ ಟಿ ದೇವೇಗೌಡರು ಇದು ನನ್ನ ಕೊನೆಯ ಚುನಾವಣೆ. ಮುಂದಿನ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಹೇಳುವ ಮೂಲಕ ರಾಜಕೀಯಕ್ಕೆ ಗುಡ್ ಬೈ ಹೇಳಿದರು. ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕು. ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಮುಂದಿನ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಹೇಳಿ ಬಂದಿದ್ದೇನೆ.

ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ದೇವರೆಂದು ಭಾವಿಸಿ ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಹೇಳಿದರು. ಚುನಾವಣೆ ನೋವು ಏನು ಎನ್ನುವುದು ನನಗೆ ಮಾತ್ರ ಗೊತ್ತು. ಇನ್ನುಳಿದ ಮೂರೂವರೆ ವರ್ಷ ಕ್ಷೇತ್ರದ ಜನರ ಜತೆ ಇರುತ್ತೇನೆ. ನನ್ನ ಜನರಿಗೆ ಒಂದು ಥ್ಯಾಂಕ್ಸ್ ಹೇಳೋಕೆ ಆಗಿಲ್ಲ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದರು.ನಾನು ಯಾರ ಹಂಗಿನಲ್ಲೂ ಬದುಕಿಲ್ಲ. ನನಗೆ ಯಾವುದೇ ರಾಜಕೀಯ ಗುರುಗಳಿಲ್ಲ.

ಕುಮಾರಸ್ವಾಮಿ, ದೇವೇಗೌಡ, ಸಿದ್ದರಾಮಯ್ಯ ಯಾರಿಂದಲೂ ಸಹಾಯವಾಗಿಲ್ಲ. ಚುನಾವಣೆಗಳಿಗಾಗಿ ಜೆಡಿಎಸ್‌ನಿಂದ ಒಂದು ರೂಪಾಯಿ ಹಣ ಪಡೆದಿಲ್ಲ. ನನ್ನ ಸ್ವಂತ ಹಣದಿಂದ ಎಲ್ಲವನ್ನೂ ಮಾಡಿದ್ದೇನೆ ಎಂದರು.  ನನಗೆ ಮೈತ್ರಿ ಸರ್ಕಾರದಲ್ಲಿ ಉನ್ನತ ಶಿಕ್ಷಣ ಖಾತೆ ಬೇಡ ಎಂದು ಒಂದು ತಿಂಗಳು ದೂರ ಸರಿದಿದ್ದೆ. ನನಗಿಷ್ಟವಾದ ಖಾತೆ ಸಿಗಲಿಲ್ಲ. ಹೇಳುತ್ತಾ ಹೋದರೆ ಸಾಕಷ್ಟಿದೆ ಎಂದು ಪರೋಕ್ಷವಾಗಿ ಜೆಡಿಎಸ್ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here