ಚುನಾವಣೆ ಬಂತೆಂದರೆ, ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುವುದು ಮೊದಲಿನಿಂದಲೂ ನಡೆದು ಬಂದಿದೆ. ಆದರೆ ಈ ಬಾರಿ ಮೊದಲ ಬಾರಿಗೆ ಪ್ರೌಢ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳದಂತೆ ಸರ್ಕಾರಕ್ಕೆ ಮನವಿಯೊಂದನ್ನು ಮಾಡಿದ್ದಾರೆ. ಇದೇ ವಿಷಯವಾಗಿ ಸಚಿವರು ಕರ್ನಾಟಕ ಮುಖ್ಯ ಚುನಾವಣೆ ಆಯೋಗಕ್ಕೆ ಈ ಪತ್ರ ಬರೆದಿದ್ದು, ಅದರಲ್ಲಿ ಅವರು ಚುನಾವಣೆ ಪ್ರಕ್ರಿಯೆ ಸೇರಿದಂತೆ, ಇನ್ನೂ ಹಲವು ಕಾರ್ಯಗಳಲ್ಲಿ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದ್ದು, ಇದರಿಂದ ಶಾಲೆಗಳಲ್ಲಿ ನಿಗಧಿತ ಸಮಯಕ್ಕೆ ಪಾಠಗಳು ಮುಗಿಯುತ್ತಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ ಈ ಕೆಲಸಗಳಿಂದಾಗಿ ಶಿಕ್ಷಕರಿಗೆ ಶಾಲಾ ಚಟುವಟಿಕೆಗಳ ಕಡೆ ಗಮನ ಹರಿಸುವುದು ಕೂಡಾ ಸಾಧ್ಯವಾಗುತ್ತಿಲ್ಲ ಎಂದು ವಿವರಿಸಿರುವ ಸಚಿವರು, ಈ ಕಾರಣಗಳಿಂದಾಗಿ ಶಿಕ್ಷಕರನ್ನು ಚುನಾವಣೆ ಕೆಲಸಗಳಿಗೆ ಬಳಸಿಕೊಳ್ಳಬೇಡಿ ಎಂದು ಮನವಿಯನ್ನು ಮಾಡಿದ್ದಾರೆ. ಸರ್ಕಾರ ನೀಡುವ ಇಂತಹ ಶಿಕ್ಷಕರಿಗೆ ಕೆಲಸಗಳಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಡೆ ಕೂಡಾ ಸರಿಯಾದ ಗಮನವನ್ನು ನೀಡಲು ಆಗುತ್ತಿಲ್ಲ. ಆದ ಕಾರಣ ಶಿಕ್ಷಕರನ್ನು ಚುನಾವಣೆ ಕೆಲಸ ಹಾಗೂ ಮತಹಾಕಿಸುವ ಬಿಎಲ್‍ಓ ಕೆಲಸಗಳನ್ನು ನೀಡದೆ ಅವರನ್ನು ಅದರಿಂದ ವಿಮುಕ್ತ ಮಾಡಬೇಕು ಎಂದು ಚುನಾವಣೆ ಆಯೋಗಕ್ಕೆ ಬರೆದ ಪತ್ರದಲ್ಲಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಶಿಕ್ಷಣ ಸಚಿವರು ಚುನಾವಣೆ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುವುದು ಬೇಡ ಎಂದು ಹೇಳಿರುವುದು ಗಮನ ಸೆಳೆದಿದೆ. ಅವರು ಶಿಕ್ಷಕರು ಚುನಾವಣೆ ಕೆಲಸಗಳಲ್ಲಿ ತೊಡಗಿಕೊಂಡರೆ ಅದು ಪಾಠ ಪ್ರವಚನ ಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿರುವುದು ಕೂಡಾ ಚಿಂತಿಸಬೇಕಾದ ವಿಷಯವೇ ಆಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here