ರಾಜ್ಯದಲ್ಲಿ ಕೊರೊನಾ ಸೋಂಕಿನ ಭೀತಿಯ ನಡುವೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮಾನ್ಯ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಎಲ್ಲರ ಸಹಾಯ, ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸಿದ್ದರು‌. ಆದರೆ ಈಗ ಕಳೆದ ಕೆಲವು ದಿನಗಳಿಂದಲೂ ಬೆಂಗಳೂರು ನಗರ ಹಾಗೂ ಸುತ್ತ ಮುತ್ತಲಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ಮಂಗಳವಾರದಿಂದ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗಧಿ ಪಡಿಸಿದ್ದ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನವನ್ನು ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಸಚಿವರಾದ ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಡಿದ್ದು, ಅಂದರೆ ಮಂಗಳವಾರದಿಂದ ಒಂದು ವಾರದ ಮಟ್ಟಿಗೆ ಅಂದರೆ ಏಳು ದಿನಗಳ ಕಾಲ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮತ್ತೊಮ್ಮೆ ಲಾಕ್​ಡೌನ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯ ಮಾಪನದ ಕುರಿತಾಗಿ ಮಾಹಿತಿಯನ್ನು ನೀಡಿದ್ದಾರೆ.
2020 ರ ಎಸ್​ಎಸ್​ಎಲ್​ಸಿ ಮೌಲ್ಯಮಾಪನ ಕಾರ್ಯವು ದಿನಾಂಕ 13-೦7-2020 ರಿಂದ ರಾಜ್ಯದ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಆರಂಭಿಸಲು ಸಿದ್ದತೆ ನಡೆದಿತ್ತು.

ಆದರೆ ರಾಜ್ಯ ಸರ್ಕಾರವು ದಿನಾಂಕ ಜುಲೈ 14 ರಿಂದ ಜುಲೈ 22 ರವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಘೋಷಿಸಿದೆ. ಆದ ಕಾರಣ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವೆರಡನ್ನು ಬಿಟ್ಟು ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಕೂಡಾ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಾಳೆಯಿಂದ ಚಾಲನೆ ದೊರೆಯಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಮೌಲ್ಯಮಾಪನ ಯಾವಾಗ ಎಂಬುದನ್ನು ಮುಂಬರುವ ದಿನಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here