ಕರ್ನಾಟಕದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ನೀಡಬೇಕೆಂದು ಶಿಫಾರಸು ಮಾಡುವ ಸರೋಜಿನಿ ಮಹಿಷಿ ವರದಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರವು ವಿಳಂಭ ಮಾಡುತ್ತಿದೆಯೆಂದು , ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ, ದನಿ ಎತ್ತಿರುವ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ಕೋರಿದ್ದು, ನಾಡಿನ ಪ್ರತಿಯೊಬ್ಬ ಕನ್ನಡಿಗರು ಕೂಡಾ ಸ್ವಯಂಪ್ರೇರಿತರಾಗಿ ಈ ಬಂದ್ ಗೆ ಬೆಂಬಲವನ್ನು ನೀಡಬೇಕೆಂದು ರಾಜ್ಯದ ವಿವಿಧ ಕನ್ನಡ ಪರ ಸಂಘಟನೆಗಳು ತಮ್ಮ ಮನವಿಯನ್ನು ಮಾಡಿಕೊಂಡಿವೆ.

ಕನ್ನಡ ಚಳುವಳಿಯ ನಾಗೇಶ್ ಅವರ ನೇತೃತ್ವದಲ್ಲಿ ರಾಜ್ಯದ 500 ಕ್ಕೂ ಹೆಚ್ಚು ಸಂಘಟನೆಗಳು ಇದಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದು, ಪ್ರಮುಖವಾಗಿ ಜಯ ಕರ್ನಾಟಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಲಾರಿ ಮಾಲೀಕರ ಸಂಘ, ಸಿಐಟಿಯು ಮೊದಲಾದ ಸಂಘಟನೆಗಳು ಫೆಬ್ರವರಿ 13 ರಂದು ಬಂದ್ ಗೆ ತಮ್ಮ ಬೆಂಬಲವನ್ನು ನೀಡಿದೆ. ಸರೋಜಿನಿ ಮಹಿಷಿ ಅವರ ವರದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯವನ್ನು ತೋರುತ್ತಿದ್ದು, ಶೀಘ್ರದಲ್ಲೇ ವರದಿಯ ಅನುಷ್ಠಾನ ಆಗಬೇಕೆಂಬುದು ಕನ್ನಡ ಪರ ಸಂಘಟನೆಗಳ ಬೇಡಿಕೆಯಾಗಿದೆ.

1983 ರಲ್ಲಿ ರಾಮಕೃಷ್ಣ ಹೆಗ್ಗಡೆ ಅವರ ನೇತೃತ್ವದ ಸರ್ಕಾರವು ಕರ್ನಾಟಕದಲ್ಲಿ ಕನ್ನಡಿಗರಿಗೆ ಎಷ್ಟು ಪ್ರಾಶಸ್ತ್ಯ ಸಿಗಬೇಕೆಂದು ತಿಳಿಸಲು, ಸಚಿವೆ ಸರೋಜಿನಿ ಮಹಿಷಿ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಆಗ ಆ ಸಮಿತಿ 1986 ರಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಿತ್ತು. ಆ ಸಮಿತಿ ಮಾಡಿದ್ದ 58 ಶಿಫಾರಸುಗಳಲ್ಲಿ ರಾಜ್ಯದಲ್ಲಿ ಇನ್ನೂ 40 ಶಿಫಾರಸುಗಳನ್ನು ಮಾತ್ರ ಒಪ್ಪಿಕೊಂಡಿದ್ದು, ಉಳಿದವು ಅನುಷ್ಠಾನಕ್ಕೆ ಬಂದಿಲ್ಲ.‌ ಆದ್ದರಿಂದಲೇ ದಶಕಗಳಿಂದಲೂ ಕನ್ನಡ ಪರ ಸಂಘಟನೆಗಳು ಸರೋಜಿನಿ ಮಹಿಷಿ ವರದಿಯ ಎಲ್ಲಾ ಶಿಫಾರಸುಗಳನ್ನು ಜಾರಿ ಮಾಡಲು ಹೋರಾಟ ನಡೆಸಿಕೊಂಡು ಬರುತ್ತಿವೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here