ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರ ಸರ್ಕಾರದಲ್ಲಿ ಸಚಿವ ಸ್ಥಾನವನ್ನು ಅಲಂಕರಿಸಿದ್ದ, ಮಾಜಿ ಕ್ರಿಕೆಟಿಗರೂ ಕೂಡಾ ಆಗಿದ್ದ ಚೇತನ್ ಚೌಹಾಣ್(73)ಅವರು ಹೃದಯಾಘಾತದಿಂದಾಗಿ ಇಂದು ಸಾವನ್ನಪ್ಪಿದ್ದಾರೆ. ಅವರು ಕೊರೊನಾ ಸೋಂಕಿನಿಂದ ಕೂಡಾ ಬಳಲುತ್ತಿದ್ದರು ಎನ್ನಲಾಗಿದ್ದು ಅವರಿಗೆ ಗುರುಗ್ರಾಮದ ಮೇದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಚೌಹಾಣ್ ಅವರಿಗೆ ಕಳೆದ ಜುಲೈ ತಿಂಗಳಲ್ಲಿ ಚೌಹಾಣ್ ಗೆ ಕೊರೊನಾ ಪಾಸಿಟಿವ್ ಧೃಢೀಕೃತವಾಗಿತ್ತು.

ಕಳೆದ ಜುಲೈ ತಿಂಗಳಲ್ಲಿ ಚೌಹಾಣ್​ ಅವರಿಗೆ ಕೊರೊನಾ ಪಾಸಿಟಿವ್ ಆದ ನಂತರ ಕಳೆದ ಒಂದು ತಿಂಗಳಿನಿಂದ ಕೊವಿಡ್-19 ವಿರುದ್ಧ ಹೋರಾಟವನ್ನು ಮಾಡಿದ್ದರೂ ಸಹಾ ಅವರು ಚೇತರಿಸಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್​ರನ್ನು ಲಖನೌನ ಸಂಜಯ್ ಗಾಂಧಿ ಆಸ್ಪತ್ರೆಯಿಂದ, ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಲಾಗಿ ಹೆಚ್ಚಿನ ಗಮನವನ್ನು ವಹಿಸಲಾಗಿತ್ತು. ಅವರನ್ನು ಅಲ್ಲಿ ವೆಂಟಿಲೇಟರ್ ಸಪೋರ್ಟ್​​ನಲ್ಲಿ ಇಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.‌

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here