ಹೊರ ರಾಜ್ಯಗಳಿಂದ ರಾಜ್ಯಗಳಿಗೆ ಬರುವ ಪ್ರಯಾಣಿಕರಿಗೆ 14 ದಿನಗಳ ಹೋಂ ಕ್ವಾರಂಟೈನ್​​ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇಂದು ಹೊಸ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಸರ್ಕಾರ ಈ ಕ್ರಮ ತಗೆದುಕೊಂಡಿದೆ.

ಮಹಾರಾಷ್ಟ್ರ ಸೇರಿದಂತೆ ಯಾವುದೇ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಮತ್ತು ಇತರರು 14 ದಿಗಳ ಕಾಲ ಹೋಂ ಕ್ವಾರಂಟೈನ್​​​ಗೆ ಒಳಗಾಗುವುದು ಕಡ್ಡಾಯವಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಇಂದು ಆದೇಶ ಹೊರಡಿಸಿದ್ದಾರೆ.

ಅನ್ ಲಾಕ್ 2.0 ನಲ್ಲಿ ಹೊರ ರಾಜ್ಯದವರು ರಾಜ್ಯಕ್ಕೆ ಬರುವ ನಿರ್ಬಂಧವನ್ನು ಸಡಿಲಗೊಳಿಸಿದ ನಂತರ ಹೋಂ ಕ್ವಾರಂಟೇನ್​ಅನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಯಾರೇ ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ಆಗಮಿಸಿದರೂ ಅವರು ಮನೆಯಲ್ಲಿ ಕ್ವಾರಂಟೈನ್​ಗೆ ಒಳಗಾಗುವುದು ಕಡ್ಡಾಯ ಮಾಡಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here