ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಕೂಡಾ ಚಿಕಿತ್ಸೆಗೆ ಅನುವು ಮಾಡಿಕೊಟ್ಟಿತ್ತು ಸರ್ಕಾರ. ಅಲ್ಲದೇ ಅಲ್ಲಿನ ದರಗಳನ್ನು ಕೂಡಾ ಸರ್ಕಾರವೇ ನಿರ್ಧರಿಸಿದಾಗ, ಅದನ್ನು ನೋಡಿ ಬಡವರಿಗೆ ಅದು ಕೈಟುಕದ್ದು ಎಂದು ತೀವ್ರವಾದ ಟೀಕೆಗಳು ಕೇಳಿ ಬಂದಿದ್ದವು. ಆದರೆ ಬಡ ಕೊರೊನಾ ರೋಗಿಗಳಿಗೆ ಕೂಡಾ ಇನ್ನು ಮುಂದೆ ಖಾಸಗಿ ಆಸ್ಪತ್ರೆಯಲ್ಲಿ ಕೂಡಾ ಕೊರೊನಾ ಚಿಕಿತ್ಸೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ ಎನ್ನುವ ಒಂದು ಒಳ್ಳೆಯ ವಿಷಯವನ್ನು ರಾಜ್ಯ ಸರ್ಕಾರ ತಿಳಿಸಿದ್ದು, ಜನರಿಗೆ ಇದು ಸ್ವಲ್ಪ ಮಟ್ಟಿನ ಸಮಾಧಾನವನ್ನು ನೀಡುವಂತಾಗಿದೆ.

‘ಸುವರ್ಣ ಆರೋಗ್ಯ’, ‘ಆಯುಷ್ಮಾನ್ ಭಾರತ್’ ಯೋಜನೆಯ ಅಡಿಯಲ್ಲಿ ಬಡವರು ಕೂಡಾ ಖಾಸಗಿ ಆಸ್ಪತ್ರೆಯಲ್ಲಿ ಉಚಿತವಾಗಿ ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ಳಬಹುದು ಎನ್ನಲಾಗಿದೆ. ನಮ್ಮ ರಾಜ್ಯದಲ್ಲಿ ಒಟ್ಟು 1 ಕೋಟಿ 37 ಲಕ್ಷ ಬಿಪಿಎಲ್ ಕಾರ್ಡ್​ಗಳಿದ್ದು, ಇದರಿಂದಾಗಿ 4 ಕೋಟಿ 20 ಲಕ್ಷ ಫಲಾನುಭವಿಗಳಿಗೆ ಇದರ ಉಪಯೋಗವಾಗುವುದು ಎಂದು ರಾಜ್ಯ ಸರ್ಕಾರವು ತಿಳಿಸಿದೆ. ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ಸಿದ್ಧವಾಗಿರುವ 518 ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್​ ಕಾರ್ಡ್​ ಹೊಂದಿರುವವರಿಗೆ ಉಚಿತವಾಗಿ ಕೊರೊನಾ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ.

ಕೊರೊನಾ ಸೋಂಕು ದೃಢಪಟ್ಟಿರುವ ರೋಗಿಗಳು ಆರೋಗ್ಯ ಅಧಿಕಾರಿಗಳಿಂದ ಸೂಚನೆಗಳನ್ನು ಪಡೆದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ. ಇದಲ್ಲದೇ ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಎಪಿಎಲ್ ಕಾರ್ಡ್​ ಬಳಕೆದಾರರು ಕೂಡಾ ಇದ್ದು, ಅವರಿಗೂ ಕೂಡಾ ಉಚಿತ ಚಿಕಿತ್ಸೆ ಕೊಡಿಸುವ ವಿಚಾರವಾಗಿ ಸರ್ಕಾರ ಚಿಂತನೆ ಮಾಡುತ್ತಿದೆ ಎನ್ನಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here