ಸತೀಶ್ ನೀನಾಸಂ ಅಭಿನಯದ ಬಹುನಿರೀಕ್ಷಿತ ಬ್ರಹ್ಮಚಾರಿ ಚಿತ್ರವು ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಹಿಟ್ ಮೇಲೆ ಹಿಟ್ ಚಿತ್ರಗಳನ್ನು ನೀಡುತ್ತಿರುವ ಸತೀಶ್ ನೀನಾಸಂ ಬ್ರಹ್ಮಚಾರಿ ಮೂಲಕ ಪ್ರೇಕ್ಷಕರನ್ನು ರಂಜಿಸಲು ಇದೇ ಶುಕ್ರವಾರದಿಂದ ತೆರೆಯ ಮೇಲೆ ಬರುತ್ತಿದ್ದಾರೆ. ಈ ಚಿತ್ರದಲ್ಲಿ ಸತೀಶ್ ನೀನಾಸಂ ಅವರಿಗೆ ನಾಯಕಿಯಾಗಿ ಗ್ಲಾಮರ್ ಬೆಡಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಸಹ ಕಲಾವಿದರಾಗಿ ಗಿರಿಜಾ ಲೋಕೇಶ್ , ಬಿರಾದಾರ್, ದತ್ತಣ್ಣ  ಶಿವರಾಜ್ ಕೆ ಆರ್ ಪೇಟೆ,  ಅಶೋಕ್ ಸೇರಿದಂತೆ ಹಲವಾರು ಕಲಾವಿದರು ಜೊತೆಯಾಗಿದ್ದಾರೆ.

ಬ್ರಹ್ಮಚಾರಿ ಚಿತ್ರದ ಬಗ್ಗೆ ಕನ್ನಡ ಸಿನಿ ರಸಿಕರಲ್ಲಿ ನಿರೀಕ್ಷೆ ಹೆಚ್ಚಾಗಲು ಕಾರಣ ಬ್ರಹ್ಮಚಾರಿ ಚಿತ್ರದ ಟೀಸರ್ ಮತ್ತು ಹಾಡುಗಳು. ಈಗಾಗಲೇ ಬ್ರಹ್ಮಚಾರಿ ಚಿತ್ರದ ಹಾಡುಗಳು ಮತ್ತು ಟೀಸರ್ ಯೂಟ್ಯೂಬ್ ನಲ್ಲಿ ಮಿಲಿಯನ್ ಗಿಂತಲೂ ಅಧಿಕ ವೀಕ್ಷಣೆ ಪಡೆದು ಮೆಚ್ಚುಗೆ ಪಡೆದುಕೊಂಡಿವೆ. ಖ್ಯಾತ ನಿರ್ಮಾಪಕರಾದ ಉದಯ್ ಮೆಹ್ತಾ ಅವರು ಬ್ರಹ್ಮಚಾರಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಹಿಂದೆ ಬಾಂಬೆ ಮಿಠಾಯಿ ಮತ್ತು ಡಬಲ್ ಇಂಜಿನ್ ನಂತಹ ಕಮರ್ಶಿಯಲ್ ಮನರಂಜನಾತ್ಮಕ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಚಂದ್ರ ಮೋಹನ್ ಅವರು ಬ್ರಹ್ಮಚಾರಿ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಧರ್ಮ ವಿಶ್ ಅವರ ಸಂಗೀತ ಈ ಚಿತ್ರಕ್ಕೆ ಇದೆ. ಇಂದಿನ ಯುವಪೀಳಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ರಹ್ಮಚಾರಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ ಎಂಬುದು ನಿರ್ಮಾಪಕ ಉದಯ್ ಮೆಹ್ತಾ ಅವರ ಮಾತಾಗಿದ್ದು ಶುಕ್ರವಾರ ಅಭಿಮಾನಿಗಳು ಬ್ರಹ್ಮಚಾರಿ ಚಿತ್ರವನ್ನು ಚಿತ್ರಮಂದಿರಗಳಲ್ಲಿ ಕಣ್ತುಂಬಿಕೊಳ್ಳಬಹುದಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here