ದೇಶದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರವಾದ ಚರ್ಚೆಗೆ ಗ್ರಾಸವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬರುತ್ತಿದೆ. ಈಗಾಗಲೇ ಈ ಕಾಯಿದೆಗೆ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಅನುಮೋದನೆ ಸಿಕ್ಕಿತ್ತು. ಆದರೆ ರಾಷ್ಟ್ರ ಪತಿಯವರು ಅಂಕಿತ ಬೇಕಿತ್ತು. ಇದೀಗ ಈ ಕಾಯ್ದೆಗೆ, ರಾಷ್ಟ್ರಪತಿ ರಾಮನಾಥ ಕೋವಿಂದ್​​ ಅವರು ತಮ್ಮ ಅಂಕಿತ ಹಾಕುವ ಮೂಲಕ ಇಂದಿನಿಂದ ಪೌರತ್ವ ತಿದ್ದುಪಡಿ ಕಾಯ್ದೆ-2019, ಇಂದಿನಿಂದ ಈ ಮಸೂದೆಯ ಅಧಿಕೃತ ಕಾಯ್ದೆಯಾಗಿ ಜಾರಿಗೆ ಬಂದಿದೆ. ಈ ಪೌರತ್ವ ತಿದ್ದುಪಡಿ ಕಾಯ್ದೆಯು ಏನನ್ನು ತಿಳಿಸುತ್ತದೆ ಎಂಬುದನ್ನು ಸಂಕ್ಷಿಪ್ತವಾಗಿ ನೋಡೋಣ.

ಈ ಕಾಯಿದೆಯ ಅನ್ವಯ ನೆರೆಯ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2014 ರೊಳಗೆ ಭಾರತಕ್ಕೆ ವಲಸೆ ಬಂದಿರುವ ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನ ಮತ್ತು ಪಾರ್ಸಿ ಮತಸ್ಥರಿಗೆ ಭಾರತದ ಪೌರತ್ವವನ್ನು ನೀಡಲಾಗುತ್ತದೆ. ಈ ಕಾಯಿದೆ ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಪೌರತ್ವ ತಿದ್ದುಪಡಿ ಮಸೂದೆ ಕಳೆದ ಬುಧವಾರದಂದು ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟಿತು. ರಾಜ್ಯ ಸಭೆಯಲ್ಲಿ ಈ ಮಸೂದೆಯ ಪರವಾಗಿ 125 ಮತ್ತು ವಿರೋಧವಾಗಿ 105 ಮತಗಳು ಬಿದಿದ್ದವು. ಇನ್ನು ಇತ್ತ ಲೋಕಸಭೆಯಲ್ಲಿ ಸೋಮವಾರ ಪೌರತ್ವ ತಿದ್ದುಪಡಿ ಮಸೂದೆ 311 ಮತಗಳ ಬೆಂಬಲ ದೊರೆತಿತ್ತು.

ಮತ್ತೊಂದು ಕಡೆ ಪೌರತ್ವ ಕಾನೂನಿನ ವಿರುದ್ಧ ಅಸ್ಸಾಂನಲ್ಲಿ ತೀವ್ರ ಪ್ರತಿಭಟನೆ ನಡೆದುಪೊಲೀಸರ ಗೋಲಿಬಾರ್ ಗೆ ಇಬ್ಬರು ಪ್ರಾಣಬಿಟ್ಟಿದ್ದಾರೆ. ಈ ಆಕ್ರೋಶದ ಜ್ವಾಲೆ ಅಸ್ಸಾಂ ನ ನೆರೆಯ ರಾಜ್ಯ ಮೇಘಾಲಯ ಹಬ್ಬಿದ್ದು, ಚಬುವಾದಲ್ಲಿ ಅಸ್ಸಾಂ ಬಿಜೆಪಿ ಶಾಸಕ ಬಿನೋದ್ ಹಜಾರಿಕಾ ಮನೆಗೆ ಪ್ರತಿಭಟನಕಾರರು ಬೆಂಕಿ ಹಾಕಿರುವ ಘಟನೆ ನಡೆದಿದೆ. ಅಲ್ಲಿನ 10 ಜಿಲ್ಲೆಗಳಲ್ಲಿ ಮೊಬೈಲ್ ಮತ್ತು ಬ್ರಾಡ್‍ಬ್ಯಾಂಡ್ ಇಂಟರ್‌ನೆಟ್ ಸಂಪರ್ಕವನ್ನು ಈಗಾಗಲೇ ನಿಲ್ಲಿಸಲಾಗಿದ್ದು, ಅಸ್ಸಾಂ ನ ರಾಜಧಾನಿ ಗುವಾಹಟಿಯಲ್ಲಿ ಮತ್ತು ದಿಬ್ರುಗಢದಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ಮತ್ತೆ ಮುಂದುವರೆಸಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here