
ಗದುಗಿನ ತೋಂಟದಾರ್ಯ ಸ್ವಾಮೀಜಿಗಳು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದ್ದ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಗಳಲ್ಲಿ ತೋಟಾಂಧರ್ಯ ಸ್ವಾಮಿಗಳು ಭಾಗವಹಿಸಿದ್ದರು. ಹೃದಯಾಘಾತದಿಂದ ಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ. ತೀವ್ರ ಹೃದಯಾಘಾತ ಅನುಭವಿಸಿದ ಶ್ರೀಗಳು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಸುದ್ದಿ ತಿಳಿದ ತಕ್ಷಣ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ದೇವೇಗೌಡ “ಸಿದ್ದಲಿಂಗ ಸ್ವಾಮೀಜಿಗಳು ನೇರ ನುಡಿಯ ಶ್ರೀಗಳಾಗಿದ್ದರು ಅವರ ನಿಧನ ದಿಗ್ಬ್ರಮೆ ಉಂಟು ಮಾಡಿದೆ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದೆ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸಹಿತ ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.ಇಂದು ಬೆಳಗ್ಗೆ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಸ್ವಾಮೀಜಿಗೆ ಹೃದಯಘಾತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಪೂಜೆಗೆಂದು ಸೇವಕರು ಎಬ್ಬಿಸಿದ್ದಾರೆ. ಆಗ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕೋಣೆಯ ಒಳಗೆ ಹೋಗಿ ನೋಡಿದಾಗ ಅವರ ಆರೋಗ್ಯ ಸ್ಥಿತಿ ಸರಿಯಿರಲಿಲ್ಲ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಶುಕ್ರವಾರ ರಾತ್ರಿ ಪೂಜೆ ಮಾಡಿ ವಿಶ್ರಾಂತಿ ಪಡೆದುಕೊಂಡಿದ್ದರು. ಮುಂಜಾನೆ 6 ಗಂಟೆಗೆ ಏಳುತ್ತಿದ್ದರು. ಆದರೆ ಶನಿವಾರ ಬೆಳಗ್ಗೆ 7.30ರ ಸಮಯವಾದರೂ ನಿದ್ದೆಯಿಂದ ಎದ್ದಿರಲಿಲ್ಲ.. ನಾವು ಕಿಟಿಕಿಯಿಂದ ನೋಡಿದಾಗ ಕುಳಿತಿದ್ದರು. ಮಠದಲ್ಲಿಯೇ ಕೋಣೆಯಲ್ಲಿ ಕುಳಿತ ಸ್ಥಳದಲ್ಲಿ ಲೋ ಬಿಪಿಯಾಗಿ ಹೃದಯಾಘಾತವಾಗಿ ಮೃತ ಪಟ್ಟಿದ್ದಾರೆ ಎಂದು ತೋಂಟದಾರ್ಯ ಮಠದ ಆಡಳಿತಾಧಿಕಾರಿ ಪಟ್ಟಣ್ಣಶೆಟ್ಟರ್ ಹೇಳಿದ್ದಾರೆ.
ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.