ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸ್ನಾತಕ/ ಸ್ನಾತಕೋತ್ತರ/ಡಿಪ್ಲೊಮ/ಪಾಲಿಟೆಕ್ನಿಕ್/ ವೃತ್ತಿಪರ ಕೋರ್ಸ್, ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಅಫ್ಲೈಡ್ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಸಂದಂರ್ಭದಲ್ಲಿ ಯಾವುದೇ ಶುಲ್ಕವನ್ನು ಕಡ್ಡಾಯವಾಗಿ ಪ್ರವೇಶಾತಿ ಸಮಯದಲ್ಲಿ ಪಾವತಿ ಮಾಡುವಂತೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು / ವಿಶ್ವವಿದ್ಯಾಲಯದ ಮುಖ್ಯಸ್ಥರು ಒತ್ತಾಯ ಮಾಡಬಾರದು ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ಸೂಚಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನ ನೀಡಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಉನ್ನತ