ಇಂಡಿಯನ್ ಪ್ರೀಮಿಯರ್ ಲೀಗ್ ನ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕನಾಗಿ ಆಡುತ್ತಿದ್ದ ಗೌತಮ್ ಗಂಭೀರ್ ಇದ್ದಕ್ಕಿದ್ದಂತೆ ನಾಯಕತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

ಈ ಸೀಸನ್ ನ ಟೂರ್ನಿಯಲ್ಲಿ ಇದುವರೆಗೂ ಡೆಲ್ಲಿ ಡೇರ್ ಡೆವಿಲ್ಸ್ ತಂಡ 6 ಪಂದ್ಯಗಳನ್ನು ಆಡಿದೆ. ಆರು ಪಂದ್ಯಗಳಲ್ಲಿ ಕೇವಲ 1 ಪಂದ್ಯ ಗೆದ್ದಿರುವ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಉಳಿದಂತೆ 8 ರ ಘಟಕ್ಕೆ ತಲುಪಲು ಇನ್ನು ಕನಿಷ್ಠ 6  ಪಂದ್ಯಗಳನ್ನು ಗೆಲ್ಲೇಲಬೇಕಿದೆ.

ಆಡಿರುವ 6 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಸೋಲು ಪಡೆದಿದೆ. ಟೂರ್ನಿಯಲ್ಲಿಯ ಮಧ್ಯದಲ್ಲಿ ತಂಡದ ನಾಯತ್ವ ಬದಲಾವಣೆ ಮಾಡುವುದು ತಂಡದ ಮೇಲೆ ಪರಿಣಾಮ ಬೀರುತ್ತದೆ ಎಂದು ಡೆಲ್ಲಿ ಡೇರ್ ಡೆವಿಲ್ಸ್ ಅಭಿಮಾನಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಆದರೆ ಗೌತಮ್ ಗಂಭೀರ್ ಅವರು ನಾನು ವೈಯುಕ್ತಿಕವಾಗಿ ತೀರ್ಮಾನಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ‌.ನನ್ನ ಮೇಲೆ ನಾಯಕತ್ವ ತ್ಯಜಿಸುವಂತೆ ಯಾರು ಒತ್ತಡ ಹೇರಿಲ್ಲ ಎಂದು ತಿಳಿಸಿದ್ದಾರೆ‌.ಇನ್ನು ಮುಂದೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕನಾಗಿ ಶ್ರೇಯಸ್ ಅಯ್ಯರ್ ಮುಂದುವರಿಯಲಿದ್ದಾರೆ‌.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here