ಕೊರೊನಾ ಸೋಂಕಿತರನ್ನು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲು ಆಸ್ಪತ್ರೆಗಳು ಅವಕಾಶವನ್ನು ನೀಡಿರಲಿಲ್ಲ. ಆದರೆ ದಿನೇ ದಿನೇ ರಾಜ್ಯದಲ್ಲಿ ಸೋಂಕು ಏರುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಇಂದು ನಡೆದ ಸಭೆಯಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅರ್ಧಗಂಟೆಯಲ್ಲಿ ಸಮಾಲೋಚನೆಯನ್ನು ನಡೆಸುವ ಮೂಲಕ ಖಾಸಗಿ ಆಸ್ಪತ್ರೆಗಳ ಆಡಳಿತವು 2500 ಬೆಡ್​ಗಳನ್ನು ಸೋಂಕಿತರಿಗೆ ಮೀಸಲಿಡುವಂತೆ ನಿರ್ದೇಶನವನ್ನು ನೀಡಿದ್ದರು. ಈ ವಿಷಯವಾಗಿ ಸಭೆಯಲ್ಲಿ ಸಮಾಲೋಚನೆಯನ್ನು ನಡೆಸಿದ ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್​ ಕಡೆಗೂ ತನ್ನ ‌ನಿರ್ಧಾರವನ್ನು ಪ್ರಕಟ ಮಾಡಿದೆ.

ಇಂದು ನಡೆದ ಸಭೆಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ಸೂಚನೆಯನ್ನು ಕಡೆಗೂ ಒಪ್ಪಿರುವ ಖಾಸಗಿ ಆಸ್ಪತ್ರೆಗಳ ಮಾಲೀಕರು ಇನ್ನೊಂದು ವಾರದ ಅವಧಿಯಲ್ಲಿ 1500 ಬೆಡ್​ಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ನೀಡುವುದಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲದೇ ಅದರ ಮುಂದಿನ ವಾರದಲ್ಲಿ ಉಳಿದ ಸಾವಿರ ಬೆಡ್ ಗಳನ್ನು ವ್ಯವಸ್ಥೆ ಮಾಡುವುದಾಗಿ ಸರ್ಕಾರಕ್ಕೆ ಅವರು ತಮ್ಮ ನಿರ್ಣಯದ ಕುರತಾಗಿ ತಿಳಿಸಿದ್ದಾರೆ. ಇದಲ್ಲದೇ ಕೋವಿಡ್-19 ಉಸ್ತುವಾರಿಯನ್ನು ಈಗ ವಹಿಸಿಕೊಂಡಿರುವ ಸಚಿವ ಆರ್.ಅಶೋಕ್ ಅವರು. ಖಾಸಗಿ ಆಸ್ಪತ್ರೆಗಳು 750 ಬೆಡ್​ಗಳ ವ್ಯವಸ್ಥೆಯನ್ನು ನಾಳೆಯೇ ಮಾಡುವುದಾಗಿ ಹೇಳಿವೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಖಾಸಗಿ ಅಸ್ಪತ್ರೆ ಮಾಲೀಕರು ಕೂಡಾ ಸರ್ಕಾರಕ್ಕೆ, ಕೋವಿಡ್-19 ಅಲ್ಲದೆ ಇರುವ ಪೇಷೆಂಟ್‌ಗಳಿಗೆ ಹೋಟೆಲ್‌ಗಳಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು ಎಂಬುದಾಗಿ ಮಾಹಿತಿಯನ್ನು ನೀಡಿದ್ದು, ಅಂತಹವರಿಗೆ ಪೊಲೀಸ್​ ಸೆಕ್ಯೂರಿಟಿ ನೀಡಬೇಕು ಎಂದು ಮನವಿಯನ್ನು ಮಾಡಿದ್ದು, ಅವರ ಮನವಿಗೆ ಸರ್ಕಾರ ತನ್ನ ಒಪ್ಪಿಗೆಯನ್ನು ಸೂಚಿಸಿದೆ ಎನ್ನಲಾಗಿದೆ. ಈ ಮೂಲಕ ಖಾಸಗಿ ಆಸ್ಪತ್ರೆಗಳು ಕೋವಿಡ್-19 ಚಿಕಿತ್ಸೆಗೆ ಸರ್ಕಾರದ ಆದೇಶವನ್ನು ಒಪ್ಪಿ ತಮ್ಮ ಪಾತ್ರ ನಿರ್ವಹಿಸಲು ಸಜ್ಜಾಗಲಿವೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here