ಕೇಂದ್ರದ ವಿತ್ತ ಸಚಿವೆ ನಿರ್ಮಲಾ‌ ಸೀತಾರಾಮನ್ ಅವರು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ಸಂದರ್ಶನವನ್ನು ನೀಡಿದ್ದು, ಈ ಸಂದರ್ಶನದಲ್ಲಿ ಅವರು ನಷ್ಟದಲ್ಲಿ ನಡೆಯುತ್ತಿರುವ ಸರ್ಕಾರಿ ಸ್ವಾಮ್ಯಕ್ಕೊಳ್ಳಪಟ್ಟಿರುವ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಕಂಪನಿಗಳನ್ನು ಮುಂದಿನ ವರ್ಷದ ಮಾರ್ಚ್ ನಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿ ಕ್ರೋಡೀಕರಿಸುವ ಗುರಿಯನ್ನು ಹೊಂದಿದೆ.

ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ನಷ್ಟದಲ್ಲಿ ನಡೆಯುತ್ತಿರುವ ಸರ್ಕಾರಿ ಸ್ವಾಮ್ಯದ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದ್ದು, ಈ ನಿಟ್ಟಿನಲ್ಲಿ ಹಲವು ಪ್ರಕ್ರಿಯೆಗಳು ಮುಂದುವರೆಯುತ್ತಿದೆ ಎನ್ನಲಾಗಿದೆ. ಈ ಎಲ್ಲಾ ಪ್ರಕ್ರಿಯೆಗಳು ಇದೇ ವರ್ಷ ಪೂರ್ಣಗೊಳ್ಳುಲಿದ ಎಂಬ ನಿರೀಕ್ಷೆ ಇದೆ ಎಂದು ವಿತ್ತ ಸಚಿವೆ ತಮ್ಮ‌ ನಿರ್ಮಲಾ ಸೀತಾರಾಮನ್ ತಮ್ಮ ಸಂದರ್ಶನದಲ್ಲಿ ವಿವರವಾಗಿ ತಿಳಿಸಿದ್ದಾರೆ. ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಗೆ ಅಂತಾರಾಷ್ಟ್ರೀಯ ರೋಡ್ ಶೋಗಳಲ್ಲಿ ಹೂಡಿಕೆದಾರರು ಸಾಕಷ್ಟು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಸಂಸ್ಥೆಯ ಮಾರಾಟ ಪ್ರಕ್ರಿಯೆ ಒಂದು ವರ್ಷದ ಹಿಂದೆಯೇ ನಡೆದಿತ್ತಾದರೂ, ಆಗ ಹೂಡಿಕೆದಾರರಿಂದ ಸರಿಯಾದ ಪ್ರತಿಕ್ರಿಯೆಗಳು ಬಾರದ ಕಾರಣ ಪ್ರಕ್ರಿಯೆ ಸ್ಥಗಿತಗೊಂಡಿತ್ತೆಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ತೆರಿಗೆ ಸಂಗ್ರಹ ಒತ್ತಡದಲ್ಲಿನ ಪರಿಸ್ಥಿತಿಗಳಲ್ಲಿ ಸರ್ಕಾರಿ ಸ್ವಾಮ್ಯದಿಂದ ಬಂಡವಾಳ ಹಿಂದೆಗೆತ ಕ್ರಮದಿಂದ ಸರ್ಕಾರದ ಆದಾಯ ಹೆಚ್ಚುವ ನಿರೀಕ್ಷೆ ಇದ್ದು, ಸರ್ಕಾರ ರಾಷ್ಟ್ರದಲ್ಲಿ ಆರ್ಥಿಕ ಹಿಂಜರಿತವನ್ನು ಸಂಭಾಳಿಸಲು ಸೂಕ್ತ ಸಮಯದಲ್ಲಿ ಸರಿಯಾದ ಕ್ರಮಗಳನ್ನು ಕೈಗೊಂಡಿದೆಯೆಂದೂ ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here