Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗ್ರಾಮ ಪಂಚಾಯಿತಿ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

 

ಚಿತ್ರದುರ್ಗ:ರಾಜ್ಯ ಚುನಾವಣಾ ಆಯೋಗ ಆದೇಶದಂತೆ ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. 2023ರ ಜುಲೈ 6 ರಿಂದ 26 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಜುಲೈ 06ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಜುಲೈ 12 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಜುಲೈ 13ರಂದು ನಾಮಪತ್ರಗಳ ಪರಿಶೀಲನೆ, ಜುಲೈ 15ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಜುಲೈ 23ರಂದು ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮರು ಮತದಾನದ ಅವಶ್ಯಕತೆ ಇದ್ದರೆ ಜುಲೈ 25ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಜುಲೈ 26ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುವುದು. ಜುಲೈ 26ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಚುನಾವಣಾ ನಡೆಯುವ ಗ್ರಾಮ  ಪಂಚಾಯಿತಿ ಹಾಗೂ ಸದಸ್ಯ ಸ್ಥಾನಗಳ ವಿವರ ಇಂತಿದೆ. ಮೊಳಕಾಲ್ಮೂರು ತಾಲ್ಲೂಕಿನ ಜಹಗೀರ್ ಬುಡ್ಡೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓಬಳಾಪುರ ಕ್ಷೇತ್ರದ 1 ಸ್ಥಾನ (ಸಾಮಾನ್ಯ), ಚಳ್ಳಕೆರೆ ತಾಲ್ಲೂಕಿನ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೂರಹಳ್ಳಿ-3 ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ), ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಕಟ್ಟೆ-2 ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ)ಕ್ಕೆ ಉಪಚುನಾವಣೆ ನಿಗಧಿಯಾಗಿದ್ದು, ಚುನಾವಣೆ ನಡೆಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.