ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಹಲವಾರು ಚಿತ್ರಗಳಲ್ಲಿ ನಾಯಕನಟನಾಗಿ ಅಭಿನಯಿಸಿದ್ದ ಹರಿಕೃಷ್ಣ ಅವರು ರಾಜಕೀಯದಲ್ಲಿ ಸಹ ಸಕ್ರಿಯವಾಗಿ ಪಾಲ್ಗೊಂಡಿದ್ದರು.ಅಭಿಮಾನಿಯ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಹರಿಕೃಷ್ಣ ಅವರ ಕಾರು ರಸ್ತೆಯಲ್ಲಿ ಅಪಘಾತ ಉಂಟಾಗಿ ಹರಿಕೃಷ್ಣ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಹರಿಕೃಷ್ಣ ಅವರು ಕೊನೆಯುಸಿರೆಳೆದರು.
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ ನಂದಮೂರಿ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹರಿಕೃಷ್ಣ ಅವರು ಭೀಕರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಮಿನೇನಿ ಆಸ್ಪತ್ರೆಯಲ್ಲಿ ಹರಿಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.ಹರಿಕೃಷ್ಣ ಅವರು ಅಭಿಮಾನಿಯ ಪುತ್ರನ ಮದುವೆಗೆ ತೆರಳುತ್ತಿದ್ದರು. ಆಂಧ್ರಪ್ರದೇಶದ ನಲ್ಲೂರಿಗೆ ಒಬ್ಬರು ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here